

ಶಿರಸಿ: ವಿಕೇಂದ್ರೀಕರಣ ವ್ಯವಸ್ಥೆಗೆ ಹೆಚ್ಚಿನ ಅಧಿಕಾರ ನೀಡಲು ಕೇರಳ ಮಾದರಿ ವ್ಯವಸ್ಥೆ ಅಳವಡಿಕೆಗೆ ರಾಜ್ಯ ಸರ್ಕಾರ ಮುಂದಾಗಬೇಕು ಎಂದು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.
ತಾಲೂಕಿನ ಸದಾಶಿವಳ್ಳಿ ಗ್ರಾಮ ಪಂಚಾಯಿತಿಯ 40 ಲಕ್ಷ ರೂ. ಗಳ ನೂತನ ಕಟ್ಟಡವನ್ನು ಮಂಗಳವಾರ ಉದ್ಘಾಟಿಸಿ ಅವರು ಮಾತನಾಡಿದರು.
ಯೋಜನೆಗಳ ಫಲಾನುಭವಿಗಳ ಆಯ್ಕೆ ಅಧಿಕಾರ ಕೂಡ ಪಂಚಾಯಿತಿಗೆ ನೀಡಲಾಗಿದೆ. ಹಣ ಹಂಚಿಕೆಗೆ ಆದ್ಯತೆ ನೀಡದೆ ಕಾಮಗಾರಿ ಪೂರ್ಣಗೊಳಿಸಲು ಅಧಿಕಾರವಿದೆ. ಇಂಥ ವ್ಯವಸ್ಥೆ ರಾಜ್ಯದಲ್ಲಿ ಜಾರಿಯಾಗಬೇಕು. ಇದರ ಕುರಿತು ಗ್ರಾಮೀಣಾಭಿವೃದ್ಧಿ ಸಚಿವರಿಗೂ ಸೂಚಿಸುವುದಾಗಿ ಹೇಳಿದರು.
ತಾಲೂಕು ಪಂಚಾಯಿತಿ ಸ್ಥಾಯಿ ಸಮಿತಿ ಸದಸ್ಯ ರವಿ ಹಳದೋಟ, ಸದಸ್ಯ ನರಸಿಂಹ ಬಕ್ಕಳ, ಕಾರ್ಯನಿರ್ವಾಹಕ ಅಧಿಕಾರಿ ಎಫ್.ಜಿ. ಚಿನ್ನಣ್ಣನವರ್, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗೋದಾವರಿ ಗೌಡ, ಸದಸ್ಯರಾದ ಎಂ. ಆರ್. ನಾಯ್ಕ, ಗಣಪತಿ ನಾಯ್ಕ, ಶಾರದಾ ಮುಕ್ರಿ, ಗೌರಿ ಮುಕ್ರಿ, ಶಾರದಾ ಹೆಗಡೆ, ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ರಾಮಚಂದ್ರ ಗಾಂವಕರ, ಪ್ರಮುಖರಾದ ಎಸ್.ಕೆ. ಭಾಗವತ, ಸವಿತಾ ಹೆಗಡೆ, ನಿರ್ಮಲಾ ಶೆಟ್ಟಿ, ಜಲಜಾಕ್ಷಿ ಹೆಗಡೆ, ರೇಖಾ ಭಟ್ಟ, ಮಂಜುನಾಥ ಭಂಡಾರಿ ಇತರರಿದ್ದರು. ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಕೆ.ವಿ. ಹೆಗಡೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಅಭಿವೃದ್ಧಿ ಅಧಿಕಾರಿ ಮಹ್ಮದ್ ರಿಯಾಜ್ ಸ್ವಾಗತಿಸಿದರು. ಸದಸ್ಯ ಗಜಾನನ ಭಟ್ಟ ನಿರೂಪಿಸಿದರು.