ಕೇರಳ ಲಾಟರಿ ತರುತ್ತಿದ್ದ ಇಬ್ಬರ ಬಂಧನ

Crime Logo
Published on

ಗುಂಡ್ಲುಪೇಟೆ: ಪಟ್ಟಣದ ಪೊಲೀಸರು ಕಾರ್ಯಾಚರಣೆ ನಡೆಸಿ ಕೇರಳದಿಂದ ಅಕ್ರಮವಾಗಿ ಮಾರಾಟ ಮಾಡಲು ಲಾಟರಿ ಟಿಕೇಟುಗಳನ್ನು ತರುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಕೇರಳದಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಲಾಟರಿ ಟಿಕೇಟುಗಳನ್ನು ಸಾಗಣೆ ಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಪಟ್ಟಣ ಠಾಣೆಯ ಕಾನೂನು ಸುವ್ಯವಸ್ಥೆ ವಿಭಾಗದ ಸಬ್‌ಇನ್ಸ್‌ಪೆಕ್ಟರ್ ಸಾಹೇಬ ಗೌಡ ನೇತೃತ್ವದಲ್ಲಿ ಸೋಮವಾರ ಸುಲ್ತಾನ್ ಭತ್ತೇರಿ ರಸ್ತೆಯಲ್ಲಿ ಕಾರ್ಯಾಚರಣೆ ನಡೆಸಿ, ಚನ್ನಪಟ್ಟಣದ ನಾಗೇಶ ಮತ್ತು ತಾಲೂಕಿನ ಮೊಳ್ಳಯ್ಯನಹುಂಡಿ ಗ್ರಾಮದ ಹರೀಶ್ ಎಂಬುವರನ್ನು ಬಂಧಿಸಿದ್ದಾರೆ. ಇಬ್ಬರು ಆರೋಪಿಗಳಿಂದ 78 ಸಾವಿರ ರೂಪಾಯಿ ಮೌಲ್ಯದ 1536 ಲಾಟರಿಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net