ಕೇರಳ ಲಾಟರಿ ಮಾರಾಟ ಮಾಡುತ್ತಿದ್ದವನ ಬಂಧನ

arrested
Published on

ಮೈಸೂರು: ನಗರದಲ್ಲಿ ಕೇರಳ ಲಾಟರಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ರಾಜು ಬಂಧಿತ ಆರೋಪಿ. ಕನಕದಾಸನಗರ ರಿಂಗ್ ರಸ್ತೆ ಸಮೀಪದ ಟೀ ಅಂಗಡಿ ಬಳಿ ಕೇರಳ ರಾಜ್ಯದ ಲಾಟರಿ ಟಿಕೆಟ್‌ಗಳನ್ನು ಮಾರಾಟ ಮಾಡುತ್ತಿದ್ದ.

ಖಚಿತ ಮಾಹಿತಿ ಮೇರೆಗೆ ಗಸ್ತಿನಲ್ಲಿದ್ದ ಪೊಲೀಸ್ ಸಿಬ್ಬಂದಿ ಈತನನ್ನು ಬಂಧಿಸಿದ್ದಾರೆ. ಕುವೆಂಪುನಗರ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net