

ಗುಂಡ್ಲುಪೇಟೆ: ಪಟ್ಟಣದಲ್ಲಿ ಕೇರಳದ ಲಾಟರಿ ಮಾರಾಟ ಮಾಡುತ್ತಿದ್ದ ಮಹಿಳೆಯನ್ನು ಸೆನ್ ವಿಭಾಗದ ಪೊಲೀಸರು ಶನಿವಾರ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದ್ದಾರೆ.
ಪಟ್ಟಣದ ಪ್ರವಾಸಿ ಮಂದಿರದ ಬಳಿ ಮಹಿಳೆಯೊಬ್ಬಳು ಲಾಟರಿ ಮಾರಾಟ ಮಾಡುತ್ತಿರುವ ಖಚಿತ ಮಾಹಿತಿಯ ಮೇರೆಗೆ ಸೆನ್(ಸೈಬರ್, ಎಕಾನಮಿಕ್ಸ್ ಆ್ಯಂಡ್ ನಾರ್ಕೋಟಿಕ್ಸ್) ವಿಭಾಗದ ಸಬ್ ಇನ್ಸ್‌ಪೆಕ್ಟರ್ ಆನಂದಕುಮಾರ್ ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿದರು. ಈ ವೇಳೆ 76 ಸಾವಿರ ರೂ. ಮೌಲ್ಯದ 1900 ಲಾಟರಿ ಟಿಕೆಟ್‌ಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಯಳಂದೂರು ಮೂಲದ ಮಹಿಳೆಯನ್ನು ವಶಕ್ಕೆ ಪಡೆದುಕೊಂಡು, ಪಟ್ಟಣದ ಪೊಲೀಸ್ ಠಾಣೆಗೆ ಹಸ್ತಾಂತರಿಸಿದ್ದಾರೆ.