ಕೈ ನಾಯಕರ ವಿರುದ್ಧ ಬಿಜೆಪಿ ಆಕ್ರೋಶ, ಸದನ ಬಲಿ ಪಡೆದ ಕಾಂಗ್ರೆಸ್ ನಡೆಗೆ ಅಸಮಾಧಾನ, ತಾಲೂಕು ಕಚೇರಿ ಮುಂದೆ ಪ್ರತಿಭಟನೆ

28 Nela Ph 02 BJP Portest
Published on

ನೆಲಮಂಗಲ: ಇತ್ತೀಚೆಗೆ ನಡೆದ ವಿಧಾನಸಭಾ ಅಧಿವೇಶದಲ್ಲಿ ಕೈ ನಾಯಕರು ಪ್ರತಿಭಟನೆ ಮಾಡಿ ಸದನದ ದಿಕ್ಕು ತಪ್ಪಿಸಿದ್ದಾರೆ. ಸದನದಲ್ಲಿ ಪ್ರತಿಭಟನೆ ಹೆಸರಿನಲ್ಲಿ ಕಾಲಹರಣ ಮಾಡಿದ್ದಾರೆ ಎಂದು ಬಿಜೆಪಿ ಎಸ್‌ಸಿ ಮೋರ್ಚಾ ಗ್ರಾಮಾಂತರ ಜಿಲ್ಲಾಧ್ಯಕ್ಷ ಎಂ.ಎನ್.ರಾಮು ಆಕ್ರೋಶ ವ್ಯಕ್ತಪಡಿಸಿದರು.

ವಿಧಾನಸಭಾ ಅಧಿವೇಶನದಲ್ಲಿ ಧರಣಿ ನಡೆಸುವ ಮೂಲಕ ಅಡ್ಡಿಪಡಿಸಿ ಸಾರ್ವಜನಿಕರ ಹಣ ಪೋಲು ಮಾಡಿದ್ದ ಕಾಂಗ್ರೆಸ್ ವಿರುದ್ಧ ಹಾಗೂ ರಾಜ್ಯದಲ್ಲಿ ಕೆಲ ಸಂಘಟನೆಯನ್ನು ವಜಾಗೊಳಿಸುವಂತೆ ಒತ್ತಾಯಿಸಿ ತಾಲೂಕು ಭಾಜಪ ಕಾರ್ಯಕರ್ತರು ಸೋಮವಾರ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾತನಾಡಿದರು.

ಕಾಂಗ್ರೆಸ್ ನಾಯಕರಯ ಕಲಾಪ ಅಪೋಷನ ತೆಗೆದುಕೊಂಡು ಕೋಟ್ಯಂತರ ರೂ. ಜನರ ತೆರಿಗೆ ಪೋಲು ಮಾಡಿದ್ದಾರೆ ಎಂದು ದೂರಿದರು.

ಹಿಜಾಬ್ ವಿಚಾರಕ್ಕೆ ಕಾಂಗ್ರೆಸ್‌ನ ನಿಲುವು ಹಿಜಾಬ್ ಪರ ಅಥವಾ ವಿರೋಧ ಎಂಬುದನ್ನು ಸ್ಪಷ್ಟಪಡಿಸಿದೆ ದಿನಕ್ಕೊಂದು ಹೇಳಿಕೆ ನೀಡುತ್ತಿರುವುದು ನಾಚಿಕೆಗೇಡಿನ ಸಂಗತಿ. ಸಚಿವ ಈಶ್ವರಪ್ಪ ನೀಡಿದ್ದ ಹೇಳಿಕೆ ಮುಂದಿಟ್ಟುಕೊಂಡು ಜನರ ದಿಕ್ಕುತಪ್ಪಿಸಿ ರಾಜಕೀಯ ಲಾಭ ಪಡೆಯುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿ ಕಾರ್ಯಕರ್ತರು, ಬೂತ್‌ಮಟ್ಟದಲ್ಲಿ ಕಾಂಗ್ರೆಸ್ ಜನವಿರೋಧಿ ನೀತಿ ಕುರಿತು ಜನರಿಗೆ ಜಾಗೃತಿ ಮೂಡಿಸಬೇಕಾಗಿದೆ. ಮುಂಬರುವ ಚುನಾವಣೆಯಲ್ಲಿ ಸಾರ್ವಜನಿಕರು ಜನವಿರೋಧಿ ಕಾಂಗ್ರೆಸ್‌ನ್ನು ತಿರಸ್ಕರಿಸಬೇಕಿದೆ. ಕಾಂಗ್ರೆಸ್ ಬೆಂಬಲವಾಗಿ ರಾಜ್ಯದಲ್ಲಿ ಶಾಂತಿ ಹಾಳು ಮಾಡುತ್ತಿರುವ ಸಂಘಟನೆಯನ್ನು ವಜಾಗೊಳಿಸಬೇಕು ಎಂದು ಆಗ್ರಹಿಸಿದರು.

ಬಿಜೆಪಿ ಅಧ್ಯಕ್ಷರ ನಿರ್ದೇಶದಂತೆ ರಾಜ್ಯಾದ್ಯಂತ ಕಾಂಗ್ರೆಸ್ ವಿರುದ್ಧ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ರಾಜಕೀಯ ಲಾಭಪಡೆಯಲು ಕಾಂಗ್ರೆಸ್ ಸಾರ್ವಜನಿಕರ ತೆರಿಗೆ ಹಣ ಪೋಲು ಮಾಡಿದೆ. ಪ್ರತಿಪಕ್ಷ ಸ್ಥಾನದಲ್ಲಿ ಕುಳಿತು ಜನರ ಸಮಸ್ಯೆಗಳ ಬಗ್ಗೆ ಚರ್ಚಿಸಲಾಗದೆ ಸಚಿವ ಈಶ್ಚರಪ್ಪ ಅವರ ರಾಷ್ಟಧ್ವಜದ ಹೇಳಿಕೆ ಮುಂದಿಟ್ಟುಕೊಂಡು ಜನರಿಗೆ ಅನ್ಯಾಯ ಮಾಡಿದೆ ಎಂದು ಬಿಜೆಪಿ ತಾಲೂಕು ಅಧ್ಯಕ್ಷ ಹೇಮಂತ್‌ಕುಮಾರ್ ಆಕ್ರೋಶ ವ್ಯಕ್ತಪಡಿಸಿದರು.

ಕಾಂಗ್ರೆಸ್ ವಿರುದ್ಧ ಕ್ರಮಕೈಗೊಳ್ಳುವಂತೆ ತಹಸೀಲ್ದಾರ್ ಕೆ.ಮಂಜುನಾಥ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net