ಕೈ ಸಭೆಯಲ್ಲಿ ಗದ್ದಲ

23 krp 03
Published on

ಕೆ.ಆರ್.ಪೇಟೆ: ಭಾರತ್ ಜೋಡೋ ಯಾತ್ರಗೆ ಜನ ರನ್ನು ಸಂಘಟಿಸಿ ಕರೆತರುವ ಸಂಬಂಧ ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಮಾಜಿ ಸಚಿವ ಎನ್.ಚಲುವ ರಾಯಸ್ವಾಮಿ ನೇತೃತ್ವದಲ್ಲಿ ಆಯೋಜಿಸಿದ್ದ ಕಾರ್ಯ ಕರ್ತರ ಸಭೆಯಲ್ಲಿ ಗದ್ದಲ, ಮಾತಿನ ಚಕಮಕಿ ನಡೆಯಿತು.


ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಿಕ್ಕೇರಿ ಸುರೇಶ್ ಮಾತ ನಾಡಿ, ತಾಲೂಕು ಘಟಕಗಳ ಅಧ್ಯಕ್ಷರ ಗಮನಕ್ಕೆ ಬಾರ ದಂತೆ ಯಾತ್ರೆಗೆ ಜಿಲ್ಲಾ ಉಸ್ತುವಾರಿ ಸಮಿತಿಯ ಸದಸ್ಯ ರನ್ನಾಗಿ ನೇಮಿಸಲಾಗಿದೆ. ಪಕ್ಷಕ್ಕಾಗಿ ದುಡಿಯುತ್ತಿ ರುವ ವರನ್ನು ಕಡೆಗಣಿಸಲಾಗಿದೆ. ಹಣವುಳ್ಳವರಿಗೆ ಮಣೆ ಹಾಕಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸುತ್ತಿದ್ದಂತೆ ಸಭೆಯಲ್ಲಿ ಗದ್ದಲ, ಕೂಗಾಟ ಆರಂಭವಾಯಿತು. ಮಧ್ಯ ಪ್ರವೇಶಿಸಿದ ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್, ಸುರೇಶ್ ಅವರಿಂದ ಮೈಕ್ ಪಡೆಯಲು ಮುಂದಾದರು. ಮೈಕ್ ನೀಡಲು ನಿರಾಕರಿಸಿದ ಸುರೇಶ್ ಅಸಮಾಧಾನ ವ್ಯಕ್ತಪಡಿಸಿದರು. ಗದ್ದಲ ತಹಬದಿಗೆ ಬಂದ ನಂತರ ಮಾತನಾಡಿದ ಮಾಜಿ ಸಚಿವ ಎನ್.ಚಲುವರಾಯ ಸ್ವಾಮಿ, ರಾಜಕೀಯ ಪಕ್ಷಗಳಲ್ಲಿ ಗೊಂದಲ ಸಹಜ. ಮುಂಬರುವ ಚುನಾವಣೆಯಲ್ಲಿ ಕ್ಷೇತ್ರದಿಂದ ಯಾರಿಗೆ ಟಿಕೆಟ್ ನೀಡಬೇಕೆಂದು ಒಮ್ಮತದ ತೀರ್ಮಾನಕ್ಕೆ ಬರಬೇಕು. ಕಾರ್ಯಕರ್ತರ ನಡುವೆ ಮುಖಂಡರು ಭಿನ್ನಮತ ಸೃಷ್ಟಿಸಬಾರದು ಎಂದು ಹೇಳಿದರು.


ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ಡಾ.ಎಚ್.ಎನ್.ರವೀಂದ್ರ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ.ಗಂಗಾಧರ್, ಮಾಜಿ ಶಾಸಕರಾದ ಕೆ.ಬಿ. ಚಂದ್ರ ಶೇಖರ್, ಬಿ.ಪ್ರಕಾಶ್, ಭಾರತ್ ಜೋಡೋ ಯಾತ್ರೆ ಜಿಲ್ಲಾ ಉಸ್ತುವಾರಿ ಸಮಿತಿ ಸದಸ್ಯ ವಿಜಯ ರಾಮೇಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬಿ.ನಾಗೇಂದ್ರಕುಮಾರ್, ಮುಖಂಡರಾದ ಎಂ.ಡಿ. ಕೃಷ್ಣಮೂರ್ತಿ, ಚಿನಕುರಳಿ ರಮೇಶ್, ಕೆ.ಎಲ್. ದೇವರಾಜು, ಕೊಡಗಹಳ್ಳಿ ಮಂಜೇಗೌಡ, ಹರಳಹಳ್ಳಿ ವಿಶ್ವನಾಥ್, ಡಾಲು ರವಿ, ಪುರಸಭಾ ಸದಸ್ಯರಾದ ಡಿ.ಪ್ರೇಂಕುಮಾರ್, ಕೆ.ಆರ್.ರವೀಂದ್ರ ಬಾಬು, ರಾಜಯ್ಯ, ಬಸ್ತಿರಂಗಪ್ಪ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net