ಕೈಗಳ ಸ್ವಚ್ಛತೆಗೆ ಪ್ರಧಾನ ಆದ್ಯತೆ ನೀಡಿ

mysore
Published on

ಮೈಸೂರು: ಆಸ್ಪತ್ರೆಗಳು ಮತ್ತು ಆರೋಗ್ಯ ಸಂರಕ್ಷಣಾ ವ್ಯವಸ್ಥೆಯಲ್ಲಿ ಕೈ ನೈರ್ಮಲ್ಯದ ಪ್ರಾಮುಖ್ಯತೆ ಬಗ್ಗೆ ಅರಿವು ಮೂಡಿಸಲು ಜೆಎಸ್‌ಎಸ್ ಆಸ್ಪತ್ರೆಯಲ್ಲಿ ವಿಶ್ವ ಕೈ ನೈರ್ಮಲ್ಯ ದಿನವನ್ನು ಶನಿವಾರ ಆಚರಿಸಲಾಯಿತು.

ಜೆಎಸ್‌ಎಸ್ ಆಸ್ಪತ್ರೆಯ ನಿರ್ದೇಶಕ ಡಾ.ಸಿ.ಪಿ.ಮಧು ಮಾತನಾಡಿ, ಸೋಂಕುಗಳು ಅಥವಾ ಕೀಟಾಣುಗಳು ನಮ್ಮ ದೇಹವನ್ನು ಪ್ರವೇಶಿಸುವುದು ಕೈಗಳಿಂದ. ಆದ್ದರಿಂದ ಕೈಗಳ ಸ್ವಚ್ಛತೆಗೆ ಪ್ರಧಾನ ಆದ್ಯತೆ ನೀಡಬೇಕು.

ಜತೆಗೆ, ಆಸ್ಪತ್ರೆಯ ಎಲ್ಲ ವಿಭಾಗದಲ್ಲಿ ನೈರ್ಮಲ್ಯ ಕಾಪಾಡುವಂತೆ ನಮ್ಮ ಮನೆಗಳು ಮತ್ತು ನಮ್ಮ ಕೈಗಳನ್ನು ಸ್ವಚ್ಛವಾಗಿ ಇಟ್ಟುಕೊಳ್ಳಬೇಕು ಎಂದು ತಿಳಿಸಿದರು.

ದೀಪಕ್ ಫರ್ಟಿಲೈಸರ್ಸ್‌ ಪೆಟ್ರೋಕೆಮಿಕಲ್ಸ್‌ನ ಎಜಿಎಂ ಡಾ.ಪಲ್ಲವಿ ಚೌಧರಿ ಅವರು ಸೋಂಕು ನಿಯಂತ್ರಣ ಉತ್ಪನ್ನಗಳನ್ನು ನೀಡಿ ಅದರಿಂದ ಹೇಗೆ ಕೈಗಳನ್ನು ಸ್ವಚ್ಛತೆ ಮಾಡಬಹುದು ಎಂಬುದರ ಬಗ್ಗೆ ಪ್ರಾತ್ಯಕ್ಷಿಕೆ ನೀಡಿದರು.

ಮೈಕ್ರೋಬಯಾಲಜಿ ವಿಭಾಗದ ಮುಖ್ಯಸ್ಥೆ ಡಾ.ಸುಮನಾ ಅವರು ಸ್ವರಚಿತ ಹಾಡಿನ ಮೂಲಕ ಕೈ ತೊಳೆಯುವ ವಿಧಾನವನ್ನು ತಿಳಿಸಿದರು.

ಜೆಎಸ್‌ಎಸ್ ಮೆಡಿಕಲ್ ಕಾಲೇಜಿನ ಉಪಪ್ರಾಂಶುಪಾಲ ಡಾ.ಮಾಂತಪ್ಪ್ಪ, ಜೆಎಸ್‌ಎಸ್ ಆಸ್ಪತ್ರೆಯ ನಿರ್ದೇಶಕ ಡಾ. ಜಿ.ವಿ.ಮಂಜುನಾಥ್, ಆಸ್ಪತ್ರೆಯ ಸೋಂಕು ನಿಯಂತ್ರಣ ಸಮಿತಿಯ ಮುಖ್ಯಸ್ಥೆ ಡಾ.ರಶ್ಮಿ ಪಿ.ಮಹಾಲೆ, ನರ್ಸಿಂಗ್ ವಿಭಾಗದ ಮುಖ್ಯಸ್ಥೆ ಜಾನೆಟ್ ಮಥಿಯಾಸ್, ಆಡಳಿತಾಧಿಕಾರಿ ಲೋಕೇಶ್, ಜೆಎಸ್‌ಎಸ್ ಸ್ಕೂಲ್ ಆಫ್ ನರ್ಸಿಂಗ್, ಜೆಎಸ್‌ಎಸ್ ಕಾಲೇಜ್ ಆಫ್ ನರ್ಸಿಂಗ್, ವಿದ್ಯಾರ್ಥಿಗಳು ಮತ್ತು ಆಸ್ಪತ್ರೆ ಸಿಬ್ಬಂದಿ ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net