

ಕಲಬುರಗಿ: ೨೦೨೩-೨೪ನೇ ಸಾಲಿಗೆ ನೇಕಾರ ಸಮ್ಮಾನ್ ಯೋಜನೆಯಡಿ ಕೈಮಗ್ಗ ನೇಯ್ಗೆಯಲ್ಲಿ ಮತ್ತು ಮಗ್ಗ ಪೂರ್ವ ಚಟುವಟಿಕೆಗಳಲ್ಲಿ ತೊಡಗಿರುವ ಕೈಮಗ್ಗ ನೇಕಾರರನ್ನು ನೇಕಾರ ಸಮ್ಮಾನ್ ಯೋಜನೆಯಡಿ ಅಳವಡಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್ ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.
ಯೋಜನೆಯಡಿ ಅಳವಡಿಸದೇ ಇರುವ ಕೈಮಗ್ಗ ನೇಕಾರರು ಮತ್ತು ಮಗ್ಗ ಪೂರ್ವ ಚಟುವಟಿಕೆಗಳಲ್ಲಿ ತೊಡಗಿರುವ ನೇಕಾರರು, ಈ ಯೋಜನೆಯಡಿ ವಾರ್ಷಿಕ ಆರ್ಥಿಕ ಸಹಾಯ ಪಡೆಯಲು ಇಚ್ಚಿಸುವ ವೃತ್ತಿ ನಿರತ ಕೈಮಗ್ಗ ಹಾಗೂ ಮಗ್ಗಪೂರ್ವ ಚಟುವಟಿಕೆಗಳಲ್ಲಿ ತೊಡಗಿರುವವರು, ನೇಕಾರರ ಗುರುತಿನ ಚೀಟಿ, ಆಧಾರ್ ಕಾರ್ಡ್, ರೇಷನ್ ಕಾರ್ಡ್, ೨ ಸ್ಟಾಂಪ್ ಸೈಜ್ ಪೋಟೋ, ಬ್ಯಾಂಕ್ ಖಾತೆ ಪ್ರತಿ ಹಾಗೂ ನೇಯ್ಗೆ ಮಗ್ಗ ಪೂರ್ವ ಚಟುವಟಿಕೆಯಲ್ಲ್ಲಿ ತೊಡಗಿರುವ ( ೪” * ೬”) ಭಾವಚಿತ್ರದೊಂದಿಗೆ ಅರ್ಜಿಯನ್ನು ಕೂಡಲೇ ಸಲ್ಲಿಸುವಂತೆ ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ ಕಛೇರಿಯ ದೂರವಾಣಿಗೆ ಸಂಪರ್ಕಿಸಲು ಕೋರಿದೆ.