ಕೈವಾರ ತಾತಯ್ಯ ಜಯಂತಿ ಆಚರಣೆ

14-kollegalphoto-1,,
Published on

ಕೊಳ್ಳೇಗಾಲ: ಪಟ್ಟಣದ ಉಪವಿಭಾಗಾಧಿಕಾರಿ ಕಚೇರಿ ಸಭಾಂಗಣದಲ್ಲಿ ತಾಲೂಕು ಆಡಳಿತ ಹಾಗೂ ರಾಷ್ಟ್ರಿಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಶುಕ್ರವಾರ ಶ್ರೀ ಯೋಗಿನಾರೇಯಣ ಯತೀಂದ್ರರ (ಕೈವಾರ ತಾತಯ್ಯ) ಜಯಂತಿ ಆಚರಣೆ ಮಾಡಲಾಯಿತು.

ಈ ವೇಳೆ ಕೈವಾರ ತಾತಯ್ಯ ಅವರ ಭಾವಚಿತ್ರಕ್ಕೆ ಗಣ್ಯರು ಪುಷ್ಪನಮನ ಸಲ್ಲಿಸಿದರು. ಎಂಜಿಎಸ್‌ವಿ ಪ್ರೌಢಶಾಲಾ ಸಹ ಶಿಕ್ಷಕ ಆನಂದರಾಜ್ ಮಾತನಾಡಿ, ಕೈವಾರ ತಾತಯ್ಯ ಅವರ ತತ್ವ ಹಾಗೂ ಆದರ್ಶಗಳನ್ನು ಪ್ರತಿಯೊಬ್ಬರು ರೂಢಿಸಿಕೊಳ್ಳಬೇಕು ಎಂದರು.

ತಹಸೀಲ್ದಾರ್ ಬಸವರಾಜು, ಬಿಇಒ ಮಂಜುಳಾ, ತಾಲೂಕು ಗ್ಯಾರಂಟಿಗಳ ಅನುಷ್ಠಾನ ಸಮಿತಿ ಅಧ್ಯಕ್ಷ ರಾಜೇಂದ್ರ ಮೋಳೆ, ಎಪಿಎಂಸಿ ಮಾಜಿ ಅಧ್ಯಕ್ಷ ರವೀಂದ್ರ, ಉದಯಕುಮಾರ್, ಆನಂದ್, ಮಹೇಶ್, ರಮೇಶ್, ರಜಿನಿ, ನಾಗರಾಜು, ಸುಮನ್, ಕರವೇ (ಪ್ರವೀಣ್ ಶೆಟ್ಟಿ ಬಣ) ತಾಲೂಕು ಅಧ್ಯಕ್ಷ ಜಗದೀಶ್ ಶಾಸ್ತ್ರಿ, ಕಾರ್ಮಿಕ ಇಲಾಖೆ ನಿರೀಕ್ಷಕ ರಾಜೇಂದ್ರ ಪ್ರಸಾದ್, ಭೂಮಾಪನ ಇಲಾಖೆಯ ಚೇತನ್, ಶ್ರೀನಿವಾಸ್‌ಮೂರ್ತಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net