ಕೊಡಗಲ್ಲಿ 6.35 ಮಿ.ಮೀ. ಮಳೆ

rain
Published on


ಮಡಿಕೇರಿ : ಕೊಡಗಿನಲ್ಲಿ 24 ಗಂಟೆ ಅವಧಿಯಲ್ಲಿ ಸರಾಸರಿ 6.35 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 3.42 ಮಿ.ಮೀ. ಮಳೆ ಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 2,863.75 ಮಿ.ಮೀ. ಆಗಿದ್ದು, ಕಳೆದ ವರ್ಷ ಇದೇ ಅವಧಿಯಲ್ಲಿ 2,087.52 ಮಿ.ಮೀ. ಮಳೆಯಾಗಿತ್ತು.
ಮಡಿಕೇರಿ ತಾಲೂಕಿನಲ್ಲಿ ಸರಾಸರಿ ಮಳೆ 18.90 ಮಿ.ಮೀ. ಆಗಿದ್ದ, ಕಳೆದ ವರ್ಷ 2.50 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 4,161.76 ಮಿ.ಮೀ. ಆಗಿದ್ದು, ಕಳೆದ ವರ್ಷ 2,932.71 ಮಿ.ಮೀ. ಮಳೆಯಾಗಿತ್ತು. ವಿರಾಜಪೇಟೆ ತಾಲೂಕಿನಲ್ಲಿ ಮಳೆಯಾಗಿಲ್ಲ. ಕಳೆದ ವರ್ಷ 7.27 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 2,169.25 ಮಿ.ಮೀ. ಆಗಿದ್ದು, ಕಳೆದ ವರ್ಷ 1,680.49 ಮಿ.ಮೀ. ಮಳೆಯಾಗಿತ್ತು.
ಸೋಮವಾರಪೇಟೆ ತಾಲೂಕಿನಲ್ಲಿ ಸರಾಸರಿ 0.17 ಮಿ.ಮೀ. ಮಳೆಯಾಗಿದ್ದು, ಕಳೆದ ವರ್ಷ 0.50 ಮಿ.ಮೀ. ಮಳೆಯಾಗಿತ್ತು. ಜನವರಿ ಯಿಂದ ಇಲ್ಲಿಯವರೆಗಿನ ಮಳೆ 2,260.26 ಮಿ.ಮೀ. ಆಗಿದ್ದು, ಕಳೆದ ವರ್ಷ 1.649.38 ಮಿ.ಮೀ. ಮಳೆಯಾಗಿತ್ತು. ನಾಪೋಕ್ಲು 60.20, ಸಂಪಾಜೆ 3, ಭಾಗಮಂಡಲ 12.40, ಶಾಂತಳ್ಳಿ 1 ಮಿ.ಮೀ. ಮಳೆಯಾಗಿದೆ.
ಹಾರಂಗಿ ವಿವರ
ಹಾರಂಗಿ ಜಲಾಶಯದಲ್ಲಿ 2,857.36 ಅಡಿ ನೀರು ಸಂಗ್ರಹವಾಗಿದ್ದು, ಕಳೆದ ವರ್ಷ 2,858.16 ಅಡಿ ನೀರಿತ್ತು. ಜಲಾಶಯಕ್ಕೆ 3,333 ಕ್ಯುಸೆಕ್ ನೀರು ಹರಿದು ಬರುತ್ತಿದ್ದು, ಕಳೆದ ವರ್ಷದ ಒಳಹರಿವು 2,471 ಕ್ಯುಸೆಕ್ ಇತ್ತು. ನದಿಗೆ 900, ನಾಲೆಗೆ 600 ಕ್ಯುಸೆಕ್ ನೀರು ಹರಿಯ ಬಿಡಲಾಗುತ್ತಿದೆ. ಕಳೆದ ವರ್ಷ ನದಿಗೆ 758, ನಾಲೆಗೆ 1,050 ಕ್ಯುಸೆಕ್ ನೀರು ಹರಿಯ ಬಿಡಲಾಗುತ್ತಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net