ಕೊಡಗು ವಿವಿಗೆ ಸೌಲಭ್ಯ ಕಲ್ಪಿಸಲು ಯತ್ನ

23Kush01
ಕೊಡಗು ವಿವಿಯ ಜ್ಞಾನ ಕಾವೇರಿ ಆವರಣದಲ್ಲಿ ಮಾತನಾಡುತ್ತಿರುವ ಶಾಸಕ ಡಾ.ಮಂತರ್ ಗೌಡ. ಡಾ.ಸೀನಪ್ಪ, ಕೆ.ಕೆ.ಧರ್ಮಪ್ಪ, ರಾಜಕುಮಾರ್.ಎಸ್.ಮೇಟಿ ಇದ್ದರು.
Published on

ಕುಶಾಲನಗರ: ಕೊಡಗು ವಿಶ್ವವಿದ್ಯಾಲಯಕ್ಕೆ ಅಗತ್ಯವಿರುವ ಮೂಲಸೌಲಭ್ಯಗಳನ್ನು ಕಲ್ಪಿಸಿಕೊಡುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಶಾಸಕ ಡಾ.ಮಂತರ್‌ಗೌಡ ಭರವಸೆ ನೀಡಿದರು.

ಕೊಡಗು ವಿಶ್ವವಿದ್ಯಾಲಯದ ಜ್ಞಾನ ಕಾವೇರಿ ಆವರಣಕ್ಕೆ ಶನಿವಾರ ಭೇಟಿ ನೀಡಿದ ವೇಳೆ ಮಾತನಾಡಿದ ಅವರು, ವಿವಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಳ್ಳಬೇಕು. ಆ ನಿಟ್ಟಿನಲ್ಲಿ ವಿವಿ ಕಾರ್ಯ ನಿರ್ವಹಿಸಬೇಕು ಎಂದರು.

ಇಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ಮುಂದಿನ ದಿನಗಳಲ್ಲಿ ವಿವಿಧ ಸಂಸ್ಥೆಗಳ ಸಹಕಾರದೊಂದಿಗೆ ಉದ್ಯೋಗ ಮೇಳ ಆಯೋಜಿಸಲಾಗುವುದು. ವಿವಿಯಲ್ಲಿನ ಕುಂದುಕೊರತೆಗಳನ್ನು ಬಗೆಹರಿಸಲು ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.

ಇದೇ ವೇಳೆ ಶಾಸಕರನ್ನು ವಿವಿ ವತಿಯಿಂದ ಸನ್ಮಾನಿಸಲಾಯಿತು. ವಿವಿ ಕುಲಸಚಿವ (ಮೌಲ್ಯಮಾಪನ) ಡಾ.ಸೀನಪ್ಪ, ಕೇಂದ್ರದ ಪ್ರಭಾರ ನಿರ್ದೇಶಕ ಪ್ರೊ.ಕೆ. ಧರ್ಮಪ್ಪ, ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ರಾಜಕುಮಾರ್ ಎಸ್.ಮೇಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ. ಶಶಿಧರ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net