

ಮಡಿಕೇರಿ: ಮಡಿಕೇರಿ ಕೊಡವ ಸಮಾಜದ ವತಿಯಿಂದ ಸಮಾಜ ಸಭಾಂಗಣದಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪನವರ ೧೨೬ನೇ ಜನ್ಮದಿನವನ್ನು ಆಚರಿಸಲಾಯಿತು.
ಸಮಾಜದ ಅಧ್ಯಕ್ಷ ಮಂಡುವಂಡ ಪಿ.ಮುತ್ತಪ್ಪನವರು ಕಾರ್ಯಪ್ಪನವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದರು. ನಂತರ ಕೊಡಗಿನ ವೀರಪುತ್ರ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪನವರ ಜೀವನ ಸಾಧನೆಯ ಬಗ್ಗೆ ತಿಳಿಸಿದರು. ಅವರ ಶಿಸ್ತಿ ನ ಜೀವನ ಸಾಧನೆಯನ್ನು ಎಲ್ಲರು ಪಾಲಿಸುವಂತಾಗಬೇಕೆಂದರು.
ಈ ಸಂದರ್ಭದಲ್ಲಿ ಸಮಾಜದ ಕಾರ್ಯದರ್ಶಿ ಕನ್ನಂಡ ಸಂಪತ್, ಜಂಟಿ ಕಾರ್ಯದರ್ಶಿ ನಂದಿನೆರವಂಡ ದಿನೇಶ್, ನಿರ್ದೇಶಕರುಗಳಾದ ಮಂಡಿರ ಸದಾಮುದ್ದಪ್ಪ, ಶಾಂತೆಯಂಡ ವಿಶಾಲ್ ಕಾರ್ಯಪ್ಪ, ನಂದಿನೆರವಂಡ ರವಿಬಸಪ್ಪ, ಕಾಳಚಂಡ ಅಪ್ಪಣ್ಣ, ಮೂವೆರ ಜಯರಾಂ, ಕೊಡವ ಸಮಾಜ ಸಿಬ್ಬಂದಿ ವರ್ಗ, ಸೌಹಾರ್ದ ಸಹಕಾರ ಬ್ಯಾಂಕಿನ ಸಿಬ್ಬಂದಿ ವರ್ಗ, ಕೊಡವ ವಿದ್ಯಾನಿಧಿಯ ಸಿಬ್ಬಂದಿ ವರ್ಗ ಹಾಜರಿದ್ದರು.