ಕೊಣಸೂರಿನಲ್ಲಿ ಸ್ತನ್ಯಪಾನ ಸಾಪ್ತಾಹ

12BTP01
Published on

ಬೆಟ್ಟದಪುರ: ಸಮೀಪದ ಭುವನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯ ಕೊಣಸೂರು ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಇತ್ತೀಚೆಗೆ ಸ್ತನ್ಯಪಾನ ಸಾಪ್ತಾಹ ಕಾರ್ಯಕ್ರಮ ನಡೆಯಿತು.

ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಕೆ.ಆರ್. ಶಶಿ ಮಾತನಾಡಿ, ಮಗು ಹುಟ್ಟಿದ ದಿನದಿಂದ ಆರು ತಿಂಗಳ ಕಾಲ ಎದೆ ಹಾಲನ್ನು ಮಾತ್ರ ನೀಡಬೇಕು. ನಂತರ ಆರು ತಿಂಗಳಿನಿಂದ ಎರಡು ವರ್ಷಗಳವರೆಗೆ ಎದೆ ಹಾಲಿನ ಜತೆಗೆ ಪೂರಕ ಆಹಾರವನ್ನು ನೀಡಬೇಕು. ತಾಯಿ ಹಾಲು ಮಗುವಿನ ದೈಹಿಕ ಮತ್ತು ಮಾನಸಿಕ ಬೆಳವಣಿಗೆಗೆ ಅಗತ್ಯವಾದ ಎಲ್ಲ ಪೋಷಕಾಂಶ ಒಳಗೊಂಡಿದೆ. ಮಗು ತಾಯಿ ಹಾಲಿನ ಸೇವನೆಯಿಂದ ರೋಗಗಳ ವಿರುದ್ಧ ಹೋರಾಡುವ ಶಕ್ತಿ ಪಡೆಯುತ್ತದೆ ಎಂದರು.

ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪವಿತ್ರಾ, ಉಪಾಧ್ಯಕ್ಷೆ ಮಮತಾ, ಆರೋಗ್ಯ ಹಿರಿಯ ನಿರೀಕ್ಷಣಾಧಿಕಾರಿ ಡಿ. ಮಂಜು, ಆಶಾಕಾರ್ಯಕರ್ತೆ ನಾಗಮಣಿ, ಅಂಗನವಾಡಿ ಕಾರ್ಯಕರ್ತೆರಾದ ಧನಲಕ್ಷ್ಮೀ, ರಾಜೇಶ್ವರಿ ಸೇರಿದಂತೆ ಸ್ಥಳೀಯರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net