ಕೊಪ್ಪದಲ್ಲಿ ಆರೋಗ್ಯ ಉಚಿತ ತಪಾಸಣೆ ಶಿಬಿರ

21M.D.R.2
ಮದ್ದೂರು ತಾಲೂಕಿನ ಕೊಪ್ಪ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಆಯೋಜಿಸಿದ್ದ ಬೃಹತ್ ಆರೋಗ್ಯ ತಪಾಸಣೆ ಶಿಬಿರದಲ್ಲಿ ರೋಗಿಗಳ ತಪಾಸಣೆ ಮಾಡಲಾಯಿತು. ಅರ್ಜುನ್, ಶಿವಮಾದು, ವರುಣ್, ಯಶವಂತ್, ಪವನ್, ರಾಜು ಇದ್ದರು.
Published on

ಮದ್ದೂರು: ನಾಗಮಂಗಲ ವಿಧಾನಸಭಾ ಕ್ಷೇತ್ರದ ಪ್ರತಿಯೊಂದು ಹೋಬಳಿಯಲ್ಲೂ ಬೃಹತ್ ಆರೋಗ್ಯ ಉಚಿತ ಶಿಬಿರ ಆಯೋಜಿಸಿ ಅನಾರೋಗ್ಯಪೀಡಿತರನ್ನು ಗುಣಪಡಿಸುವ ಕೆಲಸವನ್ನು ಸಮಾಜ ಸೇವಕ ಮಲ್ಲಿಕಾರ್ಜುನ್ (ಫೈಟರ್ ರವಿ)ಮಾಡುತ್ತಿದ್ದಾರೆ ಎಂದು ಎನ್.ಎಚ್. ಆಸ್ಪತ್ರೆಯ ವೈದ್ಯ ಡಾ.ಧರ್ಮೇಂದ್ರ ಮೆಚ್ಚುಗೆ ವ್ಯಕ್ತಪಡಿಸಿದರು.

ತಾಲೂಕಿನ ಕೊಪ್ಪ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಆದಿಚುಂಚನಗಿರಿ ವೈದ್ಯಕೀಯ ಮಹಾ ವಿದ್ಯಾಲಯದ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಸಹಯೋಗದಲ್ಲಿ ಮಲ್ಲಿಕಾರ್ಜುನ್ (ಫೈಟರ್ ರವಿ) ಭಾನುವಾರ ಆಯೋಜಿಸಿದ್ದ ಬೃಹತ್ ಆರೋಗ್ಯ ತಪಾಸಣೆ, ರಕ್ತದಾನ ಶಿಬಿರ ಮತ್ತು ಉಚಿತ ಔಷಧಗಳ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಫೈಟರ್ ರವಿ ಅವರು ಗ್ರಾಮಾಂತರ ಪ್ರದೇಶಗಳಲ್ಲಿ ಆರೋಗ್ಯ ಶಿಬಿರ ಆಯೋಜಿಸಿ ಬಡ ಜನರಿಗೆ ನೆರವಾಗುತ್ತಿದ್ದಾರೆ. ಕೆಲವು ಕಾಯಿಲೆಗಳಿಗೆ ಉಚಿತ ಔಷಧಗಳನ್ನು ನೀಡುವ ಜತೆಗೆ ಅಗತ್ಯ ಇದ್ದವರಿಗೆ ಶಸ್ತ್ರಚಿಕಿತ್ಸೆ ಮಾಡಿಸುವ ಮೂಲಕ ಮಾನವೀಯತೆ ಮರೆಯುತ್ತಿದ್ದಾರೆ. ಇವರ ಸೇವೆ ನಿರಂತರವಾಗಿರಲಿ ಎಂದರು.

ಶಿಬಿರದಲ್ಲಿ ಹೃದಯ ರೋಗ, ನರರೋಗ, ಮೂತ್ರಪಿಂಡ, ಮಧುಮೇಹ, ಪಿತ್ತಜನಕಾಂಗ, ಕ್ಯಾನ್ಸರ್, ಗರ್ಭಿಣಿ ಮತ್ತು ಸ್ತ್ರೀರೋಗ, ಕೀಲು, ಮೂಳೆ, ದಂತ, ಕಿವಿ, ಮೂಗು, ಗಂಟಲು, ಮಕ್ಕಳು, ಕಣ್ಣು, ಚರ್ಮರೋಗಕ್ಕೆ ಸಂಬಂಧಿಸಿದಂತೆ ತಪಾಸಣೆ ನಡೆಸಲಾಯಿತು. 1800ಕ್ಕೂ ಅಧಿಕ ಜನರು ಆರೋಗ್ಯ ತಪಾಸಣೆ ಮಾಡಿಸಿಕೊಂಡರು. 420 ಜನರು ನೇತ್ರ ಶಸ್ತ್ರಚಿಕಿತ್ಸೆಗೆ ಆಯ್ಕೆ ಮಾಡಲಾಯಿತು.

ಮುಖಂಡರಾದ ಶಿವಮಾದು, ವರುಣ್, ಯಶವಂತ್, ಪವನ್, ರಾಜು, ಚಂದ್ರಣ್ಣ, ಅರ್ಜುನ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net