ಕೊಪ್ಪಳದಲ್ಲಿ 2.78ಲಕ್ಷ ಗೃಹ ಲಕ್ಷ್ಮೀಯರ ನೋಂದಣಿ

gruhalakshmi
Published on

ಕೊಪ್ಪಳ: ರಾಜ್ಯ ಸರ್ಕಾರದ ನಾಲ್ಕನೇ ಗ್ಯಾರಂಟಿ ಗೃಹ ಲಕ್ಷ್ಮೀ ಯೋಜನೆಗೆ ಇಂದು ಚಾಲನೆ ದೊರೆಯಲಿದೆ. ಜಿಲ್ಲೆಯಲ್ಲಿ ಯೋಜನೆಯಡಿ ಈವರೆಗೆ 2,78,881ಫಲಾನುಭವಿಗಳು ನೋಂದಣಿ ಮಾಡಿಕೊಂಡಿದ್ದಾರೆ.


ಪ್ರತಿ ಕುಟುಂಬದ ಯಜಮಾನಿ ಖಾತೆಗೆ ಪ್ರತಿ ತಿಂಗಳು ಎರಡು ಸಾವಿರ ರೂ. ಹಣ ಹಾಕುವುದು ಯೋಜನೆ ಉದ್ದೇಶ. ಜುಲೈ 20ರಿಂದ ನೋಂದಣಿ ಆರಂಭಿಸಿದ್ದು, ಕೊನೇ ದಿನಾಂಕ ನಿಗದಿಪಡಿಸಿಲ್ಲ. ಜಿಲ್ಲೆಯಲ್ಲಿ 3,31,365 ಅರ್ಹ ಫಲಾನುಭವಿಗಳಿದ್ದಾರೆ. ಅವರಲ್ಲಿ 2,78,881 ಜನರು ನೊಂದಾಯಿಸಿಕೊಂಡಿದ್ದು, ಇಂದು (ಆ.30) ಅವರ ಖಾತೆಗೆ ಹಣ ಜಮಾ ಆಗಲಿದೆ. ಈವರೆಗೆ ಶೇ.84.16ರಷ್ಟು ಫಲಾನುಭವಿಗಳು ನೋಂದಾಯಿಸಿದ್ದು, ಬಾಕಿ ಇದ್ದವರು ನೋಂದಣಿ ಮಾಡಿಸಿಕೊಂಡಲ್ಲಿ ಲಾಭ ಪಡೆಯಲು ಅವಕಾಶವಿದೆ.


ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಯೋಜನೆಗೆ ಚಾಲನೆ ನೀಡಲಿದ್ದಾರೆ. ಕೊಪ್ಪಳದ ಸಾಹಿತ್ಯ ಭವನದಲ್ಲಿ ಜಿಲ್ಲಾ ಮಟ್ಟದ ಕಾರ್ಯಕ್ರಮ ಜರುಗಲಿದೆ. ಉಳಿದಂತೆ ಆಯಾ ಗ್ರಾಪಂ ಮಟ್ಟದಲ್ಲಿ ಕಾರ್ಯಕ್ರಮ ಜರುಗಲಿದೆ. ಗಂಗಾವತಿ ತಾಲೂಕಿನ ವಡ್ಡರಹಟ್ಟಿ ಗ್ರಾಪಂನಲ್ಲಿ ಫಲಾನುಭವಿಗಳು ವಿಡಿಯೋ ಸಂವಾದ ಮೂಲಕ ಸಿಎಂ ಜತೆ ತಮ್ಮ ಅಭಿಪ್ರಾಯ ಹಂಚಿಕೊಳ್ಳಲಿದ್ದಾರೆ. ಕಾರ್ಯಕ್ರಮ ಆಯೋಜನೆಗೆ ಬೇಕಾದ ಅಗತ್ಯ ಸಿದ್ಧತೆಯನ್ನು ಜಿಲ್ಲಾಡಳಿತ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕೈಗೊಂಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net