ಕೊಲೆ ಅಪರಾಧಿಗೆ ಜೀವಾವಧಿ ಶಿಕ್ಷೆ ಪ್ರಕಟ

court
Published on

ಕೊಲೆ ಅಪರಾಧಿಗೆ ಜೀವಾವಧಿ ಶಿಕ್ಷೆ ಪ್ರಕಟ

ಬೆಳಗಾವಿ: ಲೈಂಗಿಕ ಸಂಪರ್ಕಕ್ಕೆ ಸಹಕಾರ ನೀಡದ ಮಹಿಳೆಯನ್ನು ಕೊಲೆ ಮಾಡಿದ್ದ ಅಪರಾಧಿಗೆ ಅಧಿಕ ಮತ್ತು ಜಿಲ್ಲಾ ನ್ಯಾಯಾಲಯವು ಬುಧವಾರ ಜೀವಾವಧಿ ಶಿಕ್ಷೆ ಹಾಗೂ 11 ಸಾವಿರ ದಂಡ ವಿಧಿಸಿದೆ.

ರಾಮದುರ್ಗ ನಿವಾಸಿ ನದೀಮ ಇಮಾಮಹುಸೇನ್ ಮುಲ್ಲಾ ಶಿಕ್ಷೆಗೆ ಒಳಗಾದ ಅಪರಾಧಿ.ಈತ ಕೊಲೆಯಾದ ಮಹಿಳೆಯನ್ನು ಪ್ರೀತಿಸುವಂತೆ ಪಿಡಿಸುತ್ತಿದ್ದ,ಹಾಗೂ ಲೈಂಗಿಕ ಸಂಪರ್ಕಕ್ಕೆ ಸಹಕಾರ ನೀಡದ ಹಿನ್ನೆಲೆ ಅವಳನ್ನು ಚಾಕುವಿನಿಂದ ಇರಿದು 2017ರಲ್ಲಿ ಕೊಲೆ ಮಾಡಿದ್ದ,ಈ ಕುರಿತು ರಾಮದುರ್ಗ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಕುರಿತು ವಿಚಾರಣೆ ನಡೆಸಿದ ನ್ಯಾಯಾಧೀಶೆ ಸವಿತಾಕುಮಾರಿ ಎನ್ ಅಪರಾಧಿಗೆ ಜೀವಾವಧಿ ಶಿಕ್ಷೆ ಹಾಗೂ 11 ಸಾವಿರ ದಂಡ ವಿಧಿಸಿ ತೀರ್ಪು ನೀಡಿದ್ದಾರೆ.

ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಆರ್.ಜಿ.ದೇವರೆಡ್ಡಿ ವಾದ ಮಂಡಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net