ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿ ನೇಣಿಗೆ ಶರಣು

27blrp1
Published on

ಬೇಲೂರು: ಅಕ್ರಮ ಸಂಬಂಧ ಇರಿಸಿಕೊಂಡಿದ್ದ ಮಹಿಳೆಯನ್ನು ಕೊಲೆ ಮಾಡಿ ತಲೆಮರೆಸಿಕೊಂಡಿದ್ದ ಆರೋಪಿ ಬಸವರಾಜು (ಮುತ್ತು) ತಾಲೂಕಿನ ಅರೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ನಾಗೇನಹಳ್ಳಿಯ ಪಂಪ್‌ಹೌಸ್ ಮನೆಯಲ್ಲಿ ನೇಣು ಹಾಕಿಕೊಂಡು ಗುರುವಾರ ಆತ್ಮಹತ್ಯೆಗೆ ಶರಣಾಗಿದ್ದಾನೆ.

ನಾಗೇನಹಳ್ಳಿಯ ಕಾಫಿ ತೋಟದ ಲೈನ್‌ಮನೆಯಲ್ಲಿ ವಾಸವಿದ್ದ ನಿಂಗಮ್ಮ ಎಂಬಾಕೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಅದೇ ಲೈನ್‌ಮನೆಯ ಪಕ್ಕದ ಮನೆಯಲ್ಲೇ ವಾಸವಿದ್ದ ಮುಂಡರಗಿ ತಾಲೂಕಿನ ಹಿರೇವಡ್ಡರಹಟ್ಟಿ ಗ್ರಾಮದ ಅವಿವಾಹಿತ ಬಸವರಾಜು, ಆಕೆ ಕೆಲಸ ಮಾಡುತ್ತಿದ್ದ ಮಾಲೀಕರ ಮನೆಯ ದನದ ಕೊಟ್ಟಿಗೆಯಲ್ಲಿ ಚಾಕುವಿನಿಂದ ಇರಿದು ಮಂಗಳವಾರ ಕೊಲೆ ಮಾಡಿದ್ದ. ಮಗಳನ್ನು ಬಿಡಿಸಲು ಬಂದ ಕಾಳಮ್ಮನಿಗೂ ಚಾಕುವಿನಿಂದ ಚುಚ್ಚಿದ್ದರಿಂದ ಆಕೆ ಗಂಭೀರವಾಗಿ ಗಾಯಗೊಂಡು ಹಾಸನ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net