ಕೊಲೆಗೆ ಯತ್ನಿಸಿದ ವ್ಯಕ್ತಿಯ ಬಂಧನ

crime
Published on

ಕೊಲೆಗೆ ಯತ್ನಿಸಿದ ವ್ಯಕ್ತಿಯ ಬಂಧನ

ಬೆಳಗಾವಿ: ಹಣಕಾಸಿನ ವಿಷಯಕ್ಕೆ ಸಂಬಂಧಿಸಿದಂತೆ ನಡೆದ ಗಲಾಟೆಯಲ್ಲಿ ಮಾರಕಾಸ್ತ್ರ ದಿಂದ ಕೊಲೆಗೆ ಯತ್ನಿಸಿದ ವ್ಯಕ್ತಿಯನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ.

ಶಹಾಪುರದ ನಿವಾಸಿ ಸಾಗರ ಪಾಂಡುರಂಗ ಸಾಲಗುಡೆ(೩೭) ಬಂಧಿತ ಆರೋಪಿ. ಪ್ರಸಾದ ಚಂದ್ರಶೇಖರ ಜಾದವ ಹಲ್ಲೆಗೊಳಗಾದ ವ್ಯಕ್ತಿ. ಇವರಿಬ್ಬರ ನಡುವೇ ಹಣಕಾಸಿನ ವಿಷಯಕ್ಕೆ ಸಂಬಂಧಿಸಿದಂತೆ ನಡೆದ ಜಗಳದ ವೇಳೆ ಆರೋಪಿ ಸಾಗರ ಹಲ್ಲೆಗೊಳಗಾದ ಪ್ರಸಾದನ ಮೇಲೆ ಮಾರಕಾಸ್ತçಗಳಿಂದ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ್ದನು.

ಈ ಕುರಿತು ಶಹಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net