ಕೊಳೆತ ಸ್ಥಿತಿಯಲ್ಲಿ ಅಪರಿಚಿತನ ಶವ ಪತ್ತೆ, ಕೊಲೆ ಮಾಡಿ ಕೆರೆಯಲ್ಲಿ ಎಸೆದಿರುವ ಶಂಕೆ

22 Nela Ph 02 ASP Visit
Published on

ನೆಲಮಂಗಲ: ತಾಲೂಕಿನ ಭಟ್ಟರಹಳ್ಳಿಯ ಕೆರೆಯಲ್ಲಿ ಗುರುವಾರ ಮಧ್ಯಾಹ್ನ ಅಪರಿಚಿತನ ಶವ ಪತ್ತೆಯಾಗಿದೆ. ಕೊಳೆತ ಸ್ಥಿತಿಯಲ್ಲಿದ್ದ ದೇಹವನ್ನು ಗಮನಿಸಿದಾಗ, ಕೊಲೆ ಮಾಡಿ, ಕೆರೆಯಲ್ಲಿ ಬಿಸಾಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

ತಾಲೂಕಿನ ಹೊನ್ನಸಂದ್ರದ ಕೆರೆಯ ಕೊಳೆತಸ್ಥಿತಿಯಲ್ಲಿದ್ದ ಮೃತದೇಹವನ್ನು ಗಮನಿಸಿದ ಸ್ಥಳೀಯರು ಗ್ರಾಮಾಂತರ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದು, ಎಸ್‌ಐ ಎಚ್.ಟಿ. ವಸಂತ್ ನೇತೃತ್ವದ ತಂಡ ಸ್ಥಳ ಪರಿಶೀಲಿಸಿ, ಶವವನ್ನು ನಗರದ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದರು.

ಶವಕ್ಕೆ ಕಲ್ಲು ಕಟ್ಟಲಾಗಿದ್ದು, ಬೇರೆಲ್ಲೋ ಕೊಲೆ ಮಾಡಿ, ಕೃತ್ಯವನ್ನು ಮರೆಮಾಚಲು ಕಲ್ಲು ಕಟ್ಟಿ ಕೆರೆಯಲ್ಲಿ ಮುಳುಗಿಸಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ.

ಜಿಲ್ಲಾ ಅಪರ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀಗಣೇಶ್, ಡಿವೈಎಸ್‌ಪಿ ಜಗದೀಶ್, ಸಿಪಿಐ ಎಂ.ಆರ್. ಹರೀಶ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net