ಕೊಳೆತ ಸ್ಥಿತಿಯಲ್ಲಿ ಹುಲಿ ಕಳೇಬರ ಪತ್ತೆ

28-APR-1A
Published on

ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕಾಡಂಚಿನ ಗುಡ್ಡದಲ್ಲಿ ಸೋಮವಾರ ಕೊಳೆತ ಸ್ಥಿತಿಯಲ್ಲಿದ್ದ ಹುಲಿ ಕಳೇಬರ ಪತ್ತೆಯಾಗಿದೆ.

ಓಂಕಾರ್ ವಲಯದ ಅರಣ್ಯ ಪ್ರದೇಶದಿಂದ ಹೊರಗಿನ ಕಾಡಂಚಿನ ಶ್ರೀಕಂಠಪುರ ಸಮೀಪದ ಗುಡ್ಡದಲ್ಲಿ 8- 9 ವರ್ಷದ ಗಂಡು ಹುಲಿಯ ಕಳೇಬರ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಓಂಕಾರ್ ವಲಯಾರಣ್ಯಾಧಿಕಾರಿ ಸತೀಶ್‌ಕುಮಾರ್, ಎಸಿಎಫ್ ಸುರೇಶ್ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದರು.

ಅರಣ್ಯ ಇಲಾಖೆಯ ಪಶುವೈದ್ಯ ಡಾ.ಮಿರ್ಜಾ ವಾಸಿಂ ಮರಣೋತ್ತರ ಪರೀಕ್ಷೆ ನಡೆಸಿದ ನಂತರ ಸುಟ್ಟು ಹಾಕಲಾಯಿತು. ಕೆಲವು ದಿನಗಳ ಹಿಂದೆ ಮೃತಪಟ್ಟಿರುವ ಹಿನ್ನೆಲೆಯಲ್ಲಿ ದೇಹದ ಹಲವು ಭಾಗಗಳು ಕೊಳೆತಿವೆ. ಹಲ್ಲುಗಳು ಮತ್ತು ಉಗುರುಗಳು ಅಲ್ಲಿಯೇ ಇವೆ. ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರ ಹುಲಿಯ ಸಾವಿಗೆ ಕಾರಣ ತಿಳಿಯಲಿದೆ ಎಂದು ಸತೀಶ್‌ಕುಮಾರ್ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net