

ಕೊಳ್ಳೇಗಾಲ: ಪಟ್ಟಣ ಪೊಲೀಸ್ ಠಾಣೆಗೆ ದಕ್ಷಿಣ ವಲಯ ಐಜಿಪಿ ಎಂ.ಬಿ.ಬೋರಲಿಂಗಯ್ಯ ಗುರುವಾರ ಭೇಟಿ ನೀಡಿದ್ದರು.
ಈ ಸಂದರ್ಭದಲ್ಲಿ ಜನನಿ ಆಸ್ಪತ್ರೆಯಲ್ಲಿ ಮೃತಪಟ್ಟ ಬಾಲಕನ ಕುಟುಂಬಸ್ಥರು ಐಜಿಪಿಯನ್ನು ಭೇಟಿ ಮಾಡಿದರು. ವೈದ್ಯರ ನಿರ್ಲಕ್ಷ್ಯದಿಂದ ಮಗು ಮೃತಪಟ್ಟಿದ್ದು, ನ್ಯಾಯ ದೊರಕಿಸಿಕೊಡಬೇಕೆಂದು ಮನವಿ ಮಾಡಿದರು.
ಇದಕ್ಕೆ ಪ್ರತಿಕ್ರಿಯಿಸಿದ ಐಜಿಪಿ, ಮರಣೋತ್ತರ ಪರೀಕ್ಷೆ ವರದಿ ಬಂದ ನಂತರ ನ್ಯಾಯ ದೊರಕಿಸಿಕೊಡುವುದಾಗಿ ಆಶ್ವಾಸನೆ ನೀಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು, ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉದೇಶ, ಡಿವೈಎಸ್ಪಿ ಸೋಮೇಗೌಡ, ವೃತ್ತ ನಿರೀಕ್ಷಕ ಕೃಷ್ಣಪ್ಪ, ಉಪನಿರೀಕ್ಷಕಿ ಉಮಾವತಿ ಹಾಗೂ ಸಿಬ್ಬಂದಿ ಇದ್ದರು.