ಕೊಳ್ಳೇಗಾಲದಲ್ಲಿ ಎ.ಆರ್.ಕೃಷ್ಣಮೂರ್ತಿಗೆ ಭವ್ಯ ಸ್ವಾಗತ

6kglphoto5.........
Published on

ಕೊಳ್ಳೇಗಾಲ: ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಘೋಷಣೆಯಾಗಿರುವ ಎ.ಆರ್.ಕೃಷ್ಣಮೂರ್ತಿ ಅವರಿಗೆ ಕೈ ಮುಖಂಡರು ಹಾಗೂ ಕಾರ್ಯಕರ್ತರು ಗುರುವಾರ ಭವ್ಯ ಸ್ವಾಗತ ಕೋರಿದರು.

ಕೊಳ್ಳೇಗಾಲಕ್ಕೆ ಆಗಮಿಸಿದ ಎ.ಆರ್.ಕೃಷ್ಣಮೂರ್ತಿ ಅವರನ್ನು ನೂರಾರು ಪಕ್ಷದ ಮುಖಂಡರು, ಕಾರ್ಯಕರ್ತರು ಆತ್ಮೀಯವಾಗಿ ಬರಮಾಡಿಕೊಂಡರು. ಜೈಕಾರ ಕೂಗಿ ಹಾರ-ಶಾಲು ಹೊದಿಸಿ ಅಭಿನಂದಿಸಿದರು.

ಡಾ.ಬಿ.ಆರ್ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಎ.ಆರ್.ಕೃಷ್ಣಮೂರ್ತಿ ಮಾತನಾಡಿ, ಪ್ರಸ್ತುತ ಸಮೀಕ್ಷೆ ಹಾಗೂ ಕಳೆದ ಚುನಾವಣೆಯಲ್ಲಿ ಪಡೆದ ಮತಗಳ ಆಧಾರದಲ್ಲಿ ಮತ್ತು ಎದುರಾಳಿ ಯಾರೇ ಆದರೂ ಗೆಲ್ಲುವ ಸಾಮರ್ಥ್ಯ ಎ.ಆರ್.ಕೃಷ್ಣಮೂರ್ತಿ ಅವರಿಗೆ ಇದೆ ಎಂಬ ಕಾರಣಕ್ಕೆ ಎಐಸಿಸಿ ಹಾಗೂ ಕೆಪಿಸಿಸಿ ನಾಯಕರು ನನ್ನನ್ನು ಅಭ್ಯರ್ಥಿಯಾಗಿ ಘೋಷಿಸಿದ್ದಾರೆ ಎಂದರು.

ರಾಷ್ಟ್ರೀಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಸ್ಪೀಕರ್ ರಮೇಶ್‌ಕುಮಾರ್ ಸೇರಿದಂತೆ ಕೇಂದ್ರ ಮತ್ತು ರಾಜ್ಯದ ಹಲವಾರು ನಾಯಕರು ನಾನು ಅಭ್ಯರ್ಥಿಯಾಗಲು ಸಹಕಾರ ನೀಡಿದ್ದಾರೆ ಎಂದರು.

224 ಕ್ಷೇತ್ರಗಳಲ್ಲಿ ಒಂದೇ ಕ್ಷೇತ್ರದಲ್ಲಿ 4 ಮಾಜಿ ಶಾಸಕರಿರುವುದು ಕೊಳ್ಳೇಗಾಲದಲ್ಲಿ ಮಾತ್ರ. ಮಾಜಿ ಶಾಸಕ ಎಸ್.ಜಯಣ್ಣ, ಎಸ್.ಬಾಲರಾಜು. ಜಿ.ಎನ್.ನಂಜುಂಡಸ್ವಾಮಿ ಬೆಂಬಲ ಪಡೆದು ಚುನಾವಣೆ ಎದುರಿಸುತ್ತೇನೆ. ದಿ.ಆರ್.ಧ್ರುವನಾರಾಯಣ ಅವರ ಆಶೀರ್ವಾದ ನನ್ನ ಮೇಲಿರಲಿ ಹಾಗೂ ಅವರ ಬೆಂಬಲಿಗರ ಸಹಕಾರವನ್ನು ಪಡೆಯುತ್ತೇನೆ ಎಂದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮರಿಸ್ವಾಮಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ತೋಟೇಶ್, ಕಾರ್ಯದರ್ಶಿ ರವಿ, ನಗರಸಭೆ ಅಧ್ಯಕ್ಷೆ ರೇಖಾ ರಮೇಶ್, ಉಪಾಧ್ಯಕ್ಷೆ ಸುಶೀಲಾ, ಸದಸ್ಯ ಶಾಂತರಾಜು, ರಾಘವೇಂದ್ರ, ಸುಮಾಸುಬ್ಬಣ್ಣ, ಮಾಜಿ ಸದಸ್ಯ ರಮೇಶ್, ಮಂಜುನಾಥ್ ಕಾಂಗ್ರೆಸ್ ಮುಖಂಡರಾದ ಕೃಷ್ಣಯ್ಯ, ಶಿವು, ಪಾಪಣ್ಣ, ಸೋಮಶೇಖರ್, ಕುಮಾರ್, ಅನ್ಸರ್ ಬೇಗ್ ನಿಂಗರಾಜು, ಮತ್ತಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net