ಕೊಳ್ಳೇಗಾಲದಲ್ಲಿ ಗುಲಾಬಿ ಹೂ ನೀಡಿ ಸ್ವಾಗತ

21-KGLPHOTO-2,, ()
ಕೊಳ್ಳೇಗಾಲದ ಸರ್ಕಾರಿ ಎಸ್‌ವಿಕೆ ಕಾಲೇಜು ಪರೀಕ್ಷಾ ಕೇಂದ್ರಕ್ಕೆ ಆಗಮಿಸಿದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ನಗರಸಭೆ ಅಧ್ಯಕ್ಷೆ ರೇಖಾ ರಮೇಶ್ ಗುಲಾಬಿ ಹೂ ನೀಡಿ ಸ್ವಾಗತಿಸಿದರು. ಸುರೇಶ್, ರಮೇಶ್, ಜಗದೀಶ್ ಇದ್ದರು.
Published on

ಕೊಳ್ಳೇಗಾಲ: ಪಟ್ಟಣದ ಸರ್ಕಾರಿ ಎಸ್‌ವಿಕೆ ಕಾಲೇಜು ಪರೀಕ್ಷಾ ಕೇಂದ್ರಕ್ಕೆ ಆಗಮಿಸಿದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ನಗರಸಭೆ ಅಧ್ಯಕ್ಷೆ ರೇಖಾ ರಮೇಶ್ ಗುಲಾಬಿ ಹೂ ನೀಡಿ ಸ್ವಾಗತಿಸಿದರು.

ರಾಜ್ಯಾದ್ಯಂತ ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭವಾಗಿದೆ. ಪರೀಕ್ಷೆಯನ್ನು ಮಕ್ಕಳು ಧೈರ್ಯದಿಂದ ಎದುರಿಸಬೇಕು. ಶಾಂತ ಮನಃಸ್ಥಿತಿಯಲ್ಲಿ ಪರೀಕ್ಷೆ ಬರೆದು ಉತ್ತೀರ್ಣರಾಗಬೇಕು. ಈ ನಿಟ್ಟಿನಲ್ಲಿ ಗುಲಾಬಿ ಹೂ ನೀಡುವ ಮೂಲಕ ಅವರಿಗೆ ಆತ್ಮಸ್ಥೈರ್ಯ ತುಂಬಲಾಗಿದೆ ಎಂದು ಹೇಳಿದರು. ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಸುರೇಶ್, ಮಾಜಿ ಅಧ್ಯಕ್ಷ ರಮೇಶ್, ಮುಖಂಡ ಜಗದೀಶ್ ಶಂಕನಪುರ ಇತರರು ಇದ್ದರು.

9 ಕೇಂದ್ರಗಳಲ್ಲಿ ಪರೀಕ್ಷೆ: ಪರೀಕ್ಷಾ ಕೇಂದ್ರಗಳಿಗೆ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ಉತ್ಸಾಹದಿಂದ ಶುಕ್ರವಾರ ಆಗಮಿಸಿದರು. ಪಟ್ಟಣದ ಸರ್ಕಾರಿ ಎಂ.ಜಿ.ಎಸ್.ವಿ. ಕಾಲೇಜು, ಸರ್ಕಾರಿ ಎಸ್.ವಿ.ಕೆ.ಕಾಲೇಜು, ಸಂತ ಫ್ರಾನ್ಸಿಸ್ ಅಸ್ಸಿಸಿ ಪ್ರೌಢಶಾಲೆ, ಲಯನ್ಸ್ ವಿದ್ಯಾಸಂಸ್ಥೆ, ವಾಸವಿ ವಿದ್ಯಾಸಂಸ್ಥೆ ಹಾಗೂ ತಾಲೂಕಿನ ಸತ್ತೇಗಾಲ ಸರ್ಕಾರಿ ಶಾಲೆ, ಚಿಲಕವಾಡಿ ಶ್ರೀ ಶಂಭುಲಿಂಗೇಶ್ವರ ಪ್ರೌಢಶಾಲೆ ಹಾಗೂ ಪ್ರಕಾಶ್ ಡಾನ್ ಬಾಸ್ಕೋ ಶಾಲೆ, ಕಾಮಗೆರೆ ಕ್ಷೇವೆಯರ್ ಪ್ರೌಢಶಾಲೆ ಸೇರಿ ಒಟ್ಟು 9 ಕೇಂದ್ರಗಳನ್ನು ತೆರೆಯಲಾಗಿತ್ತು. 2053 ಮಕ್ಕಳಲ್ಲಿ 2019 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. 34 ವಿದ್ಯಾರ್ಥಿಗಳು ಗೈರಾಗಿದ್ದರು. ಬಿಇಒ ಮಂಜುಳಾ, ಬಿಆರ್‌ಸಿ ಮಹದೇವ ಕುಮಾರ್, ಅಕ್ಷರ ದಾಸೋಹ ಬಿಸಿಯೂಟ ಯೋಜನೆಯ ರಂಗಸ್ವಾಮಿ ಪರೀಕ್ಷಾ ಕೇಂದ್ರಗಳಿಗೆ ತೆರಳಿ ಪರಿಶೀಲನೆ ನಡೆಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net