ಕೋಟಿ ವೆಚ್ಚದಲ್ಲಿ ರಾಜಕಾಲುವೆ

4 BYD 1
Published on

ಬ್ಯಾಡಗಿ: ಪಟ್ಟಣದ ಅಭಿವೃದ್ಧಿಗೆ 36 ಕೋಟಿ ರೂಪಾಯಿ ವೆಚ್ಚದ ಕಾಮಗಾರಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮುಂದಿನ ವಾರ ಚಾಲನೆ ನೀಡಲಿದ್ದಾರೆ ಎಂದು ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಹೇಳಿದರು.

ತಾಲೂಕಿನ ಕದರಮಂಡಲಗಿ ಗ್ರಾಮದಲ್ಲಿ ಸಣ್ಣ ನೀರಾವರಿ ಇಲಾಖೆ ಹಾಗೂ ಗ್ರಾಮ ಪಂಚಾಯಿತಿ ಆಶ್ರಯದಲ್ಲಿ ಒಂದು ಕೋಟಿ ರೂಪಾಯಿ ವೆಚ್ಚದಲ್ಲಿ ರಾಜಕಾಲುವೆ ನಿರ್ಮಾಣ ಕಾಮಗಾರಿಗೆ ಮಂಗಳವಾರ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.

ಗ್ರಾಮ ಪಂಚಾಯಿತಿ ಅಧ್ಯಕ್ಷ ನಾಗರಾಜ ಉಜನಿ ಅಧ್ಯಕ್ಷತೆ ವಹಿಸಿದ್ದರು. ಅಂಬಿಗರ ಚೌಡಯ್ಯ ನಿಗಮ ನಿರ್ದೇಶಕ ಜೀತೇಂದ್ರ ಸುಣಗಾರ, ಪಿಡಿಒ ಶಾರದಾ ಕುದರೇರ ಕಾರ್ಯಕ್ರಮ ನಿರ್ವಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net