ಕೋವಿಡ್ ವೇಳೆ ಖಾಕಿ ಕಾರ್ಯ ಶ್ಲಾಘನೀಯ

21KWR2
Published on

ಕಾರವಾರ: ಕೋವಿಡ್ ಸಮಯದಲ್ಲಿ ಪೊಲೀಸರ ಕಾರ್ಯ ಶ್ಲಾಘನೀಯ ಎಂದು ಜಿಲ್ಲಾ ಪ್ರಧಾನ ಮತ್ತು ಸೆಶನ್ಸ್ ನ್ಯಾಯಾಧೀಶೆ ವಿಪುಲಾ ಎಂ.ಬಿ. ಪೂಜಾರಿ ಹೇಳಿದರು.

ಜಿಲ್ಲಾ ಪೊಲೀಸ್ ಪರೇಡ್ ಮೈದಾನದಲ್ಲಿ ಬುಧವಾರ ಆಯೋಜಿಸಿದ್ದ ಪೊಲೀಸ್ ಹಿತಾತ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿ ಅವರು ಮಾತನಾಡಿದರು. ಸಾಕಷ್ಟು ಪೊಲೀಸ್ ಸಿಬ್ಬಂದಿಯೂ ಸೋಂಕಿತರಾಗಿದ್ದಾರೆ. ತಮ್ಮ ಕುಟುಂಬವನ್ನು ದೂರವಿಟ್ಟು ಅವರು ಕರ್ತವ್ಯ ನಿರ್ವಹಿಸಿದ್ದಾರೆ ಎಂದರು. ಎಸ್​ಪಿ ಶಿವಪ್ರಕಾಶ ದೇವರಾಜು ಹುತಾತ್ಮ ಪೊಲೀಸರ ಪಟ್ಟಿ ಓದಿದರು. ಮೂರು ಬಾರಿ ಗುಂಡು ಹಾರಿಸಿ, ಮೌನ ಆಚರಿಸಿ ಪೊಲೀಸ್ ಧ್ವಜವನ್ನು ಅರ್ಧಕ್ಕೆ ಇಳಿಸಿ ಹುತಾತ್ಮ ಪೊಲೀಸರಿಗೆ ಗೌರವ ಸಲ್ಲಿಸಲಾಯಿತು. ಜಿಲ್ಲಾಧಿಕಾರಿ ಡಾ.ಹರೀಶ ಕುಮಾರ ಕೆ. ಜಿಪಂ ಸಿಇಒ ಎಂ.ರೋಶನ್, ಡಿಎಫ್​ಒ ವಸಂತರೆಡ್ಡಿ ಅತಿಥಿಯಾಗಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net