ಕೋಟೆನಗರಿಯಲ್ಲಿ ಕಾಂಗ್ರೆಸ್ ಪಾದಯಾತ್ರೆ

bkt-7-7
ಬಾಗಲಕೋಟೆ ನಗರದಲ್ಲಿ ಕಾಂಗ್ರೆಸ್ ನಾಯಕರು ಪಾದಯಾತ್ರೆ ನಡೆಸಿದರು.
Published on

ಬಾಗಲಕೋಟೆ: ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಕನ್ಯಾಕುಮಾರಿಯಿಂದ ಕಾಶ್ಮೀರವರೆಗೆ ಕೈಗೊಂಡಿದ್ದ ಐತಿಹಾಸಿಕ ಭಾರತ ಜೋಡೋ ಯಾತ್ರೆ ಒಂದು ವರ್ಷ ಪೂರ್ಣಗೊಂಡ ಹಿನ್ನಲೆಯಲ್ಲಿ ಕೋಟೆನಗರಿಯಲ್ಲಿ ಕಾಂಗ್ರೆಸ್ ಹಿರಿಯ ನಾಯಕರು ಪಾದಯಾತ್ರೆ ನಡೆಸಿ ಐತಿಹಾಸಿಕ ದಿನಗಳನ್ನು ಮೇಲಕು ಹಾಕಿದರು.

ಗುರುವಾರ ಸಂಜೆ ನವನಗರದ ಜಿಲ್ಲಾ ಕಾಂಗ್ರೆಸ್ ಭವನದಿಂದ ಸಂಜೆ ೫ ಗಂಟೆಗೆ ಆರಂಭವಾದ ಪಾದಯಾತ್ರೆ ಎಸ್ಪಿ ಕಚೇರಿ ರಸ್ತೆ, ತಹಸೀಲ್ದಾರ ಕಚೇರಿ, ಜಿಲ್ಲಾಡಳಿತ ವೃತ್ತ ಮಾರ್ಗವಾಗಿ ನವನಗರದ ಬಸ್ ನಿಲ್ದಾಣ, ಪೊಲೀಸ್ ಪ್ಯಾಲೇಸ್ ವೃತ್ತ, ಎಲ್‌ಐಸಿ ವೃತ್ತ ಮೂಲಕ ಜಿಲ್ಲಾ ಕಾಂಗ್ರೆಸ್ ಭವನ ತಲುಪಿ ಮುಕ್ತಾಯಗೊಂಡಿತು.

ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಸ್.ಜಿ.ನಂಜಯ್ಯನಮಠ, ಮಾಜಿ ಸಚಿವ ಎಸ್.ಆರ್.ಪಾಟೀಲ, ಶಾಸಕರಾದ ಎಚ್.ವೈ.ಮೇಟಿ, ಜೆ.ಟಿ.ಪಾಟೀಲ, ಜಿ.ಪಂ ಮಾಜಿ ಅಧ್ಯಕ್ಷರಾದ ವೀಣಾ ಕಾಶಪ್ಪನವರ, ಬಾಯಕ್ಕ ಈಟಿ, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ರಕ್ಷಿತಾ ಈಟಿ, ಮುಖಂಡರಾದ ರಾಜು ಮನ್ನಿಕೇರಿ, ಅಬ್ದುಲ್ ರಾಜಕ್ ಬೆಣ್ಣೂರ, ಎಸ್.ಎನ್.ರಾಂಪೂರ, ಚನ್ನವೀರ ಅಂಗಡಿ, ಹಾಜಿಸಾಬ ದಂಡಿನ, ಸಿದ್ದು ಕಣ್ಣೂರ, ಬಸವರಾಜ ಸಂಶಿ, ನಾಗರಾಜ ಹದ್ಲಿ, ಶಫಿಕ ಜಮಾದಾರ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net