ಕೋಟೆನಾಡಲ್ಲಿ ಮಹಾಪರಿನಿಬ್ಬಾಣ ದಿನ ಆಚರಣೆ

Ambedkar 1
Published on

ಚಿತ್ರದುರ್ಗ: ಸರ್ಕಾರಿ, ಸಂಘ-ಸಂಸ್ಥೆಗಳ ಕಚೇರಿ, ವಿವಿಧ ವೃತ್ತಗಳು ಒಳಗೊಂಡು ಕೋಟೆನಾಡಿನ ಹಲವೆಡೆ ಬುಧವಾರ ಸಂವಿಧಾನ ಶಿಲ್ಪಿ, ಭಾರತರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ 67ನೇ ಮಹಾಪರಿನಿಬ್ಬಾಣ ದಿನ ಆಚರಿಸಲಾಯಿತು.

ಅಂಬೇಡ್ಕರ್ ವೃತ್ತದಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ಹಮ್ಮಿಕೊಂಡಿದ್ದ ದಿನಾಚರಣೆಯಲ್ಲಿ ಭೀಮ್ ರಾವ್ ಅಂಬೇಡ್ಕರ್ ಅವರ ಪ್ರತಿಮೆಗೆ ಜಿಲ್ಲಾಧಿಕಾರಿ ಜಿ.ಆರ್.ಜೆ.ದಿವ್ಯಾಪ್ರಭು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದರ್‌ಕುಮಾರ್ ಮೀನಾ ಪುಷ್ಪನಮನದೊಂದಿಗೆ ಗೌರವ ಸಲ್ಲಿಸಿದರು.

ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಜಗದೀಶ್ ಹೆಬ್ಬಳ್ಳಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಆರ್ ಬಣಕಾರ್, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಪರಮೇಶ್ವರಪ್ಪ, ಕೆಪಿಸಿಸಿ ಸದಸ್ಯ ಡಾ.ಬಿ.ತಿಪ್ಪೇಸ್ವಾಮಿ ಜೆ.ಜೆ.ಹಟ್ಟಿ, ನಗರಸಭೆ ಮಾಜಿ ಅಧ್ಯಕ್ಷ ನಿರಂಜನಮೂರ್ತಿ, ಮುಖಂಡ ಡಿ.ಎನ್.ಮೈಲಾರಪ್ಪ ಇತರರಿದ್ದರು.

ಟಿಎಚ್‌ಒ ಕಚೇರಿಯಲ್ಲಿ ಪರಿನಿರ್ವಾಣ ದಿನ ಆಚರಿಸಲಾಯಿತು. ಟಿಎಚ್‌ಒ ಡಾ.ಬಿ.ವಿ.ಗಿರೀಶ್, ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್.ಮಂಜುನಾಥ್, ಸಿಬ್ಬಂದಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net