ಕೋಟೆನಾಡಲ್ಲಿ ಸಂಭ್ರಮದ ಬಕ್ರಿದ್ ಹಬ್ಬ ಆಚರಣೆ

bkt-29-2
ಬಾಗಲಕೋಟೆಯ ಈದ್ಗಾ ಮೈದಾನದಲ್ಲಿ ಬಕ್ರಿದ್ ಹಬ್ಬದ ಅಂಗವಾಗಿ ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.
Published on

ಬಾಗಲಕೋಟೆ: ತ್ಯಾಗ, ಬಲಿದಾನದ ಪ್ರತೀಕವಾಗಿರುವ ಬಕ್ರಿದ್ ಹಬ್ಬವನ್ನು ಗುರುವಾರ ಕೋಟೆನಾಡಿನ ಮುಸ್ಲಿಂ ಬಾಂಧವರು ಸಂಭ್ರಮದಿಂದ ಆಚರಿಸಿದರು.

ಜಿಲ್ಲೆಯ ಬಾಗಲಕೋಟೆ, ಮುಧೋಳ, ಜಮಖಂಡಿ, ಹುನಗುಂದ, ಬೀಳಗಿ, ತೇರದಾಳ, ಬಾದಾಮಿ, ರಬಕವಿ-ಬನಹಟ್ಟಿ, ಕೆರೂರ, ಇಳಕಲ್ಲ, ಅಮೀನಗಡ, ಕಮತಗಿ, ಲೋಕಾಪುರ ಸೇರಿದಂತೆ ನಗರ ಹಾಗೂ ಪಟ್ಟಣ ಪ್ರದೇಶದಲ್ಲಿ ಇರುವ ಈದ್ಗಾ ಮೈದಾನಗಳಲ್ಲಿ ಮುಸ್ಲಿಂ ಸಮುದಾಯವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ನಂತರ ಪರಸ್ಪರ ಬಕ್ರಿದ್ ಹಬ್ಬದ ಶುಭಾಶಯ ವಿನಿಯಮ ಮಾಡಿಕೊಂಡರು.

ಜಿಲ್ಲಾ ಕೇಂದ್ರವಾದ ಬಾಗಲಕೋಟೆಯಲ್ಲಿ ಹಳೇ ಬಾಗಲಕೋಟೆ ಹಾಗೂ ನವನಗರದ ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ ನಡೆಯಿತು. ಸಾಮೂಹಿಕ ಪ್ರಾರ್ಥನೆ ನಂತರ ನಗರದಲ್ಲಿ ಮುಸ್ಲಿಂ ಬಾಂಧವರು ಕುಟುಂಬದ ಸದಸ್ಯರು, ಬಂಧುಗಳು ಹಾಗೂ ಹಿತೈಷಿಗಳು ಪರಸ್ಪರ ಬಕ್ರಿದ್ ಶುಭಾಷಯ ತಿಳಿಸಿ, ಸಂಭ್ರಮದಿಂದ ಹಬ್ಬ ಆಚರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net