

ಗುಂಡ್ಲುಪೇಟೆ: ಶ್ರೀರಾಮನವಮಿ ಅಂಗವಾಗಿ ಪಟ್ಟಣದ ಶ್ರೀ ರಾಮೇಶ್ವರ ದೇವಾಲಯ ಹಾಗೂ ಕೋದಂಡರಾಮ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.
ಧಾರ್ಮಿಕ ದತ್ತಿ ಇಲಾಖೆಗೆ ಸೇರಿರುವ ಕೋದಂಡರಾಮ ದೇವಾಲಯದಲ್ಲಿ ಪ್ರಧಾನ ಅರ್ಚಕ ಶಂಕರನಾರಾಯಣ ಜೋಯಿಸ್ ನೇತೃತ್ವದಲ್ಲಿ ಶ್ರೀರಾಮ ದೇವರ ಮೂರ್ತಿಗೆ ಹಾಲು, ಮೊಸರು, ಜೇನುತುಪ್ಪ ಇತ್ಯಾದಿ ಮಂಗಳದ್ರವ್ಯಗಳಿಂದ ಅಭಿಷೇಕ ಮಾಡಲಾಯಿತು. ನಂತರ ವಸ್ತ್ರಗಳಿಂದ ಅಲಂಕಾರ ಮಾಡಲಾಯಿತು. ದೇವಾಲಯಕ್ಕೆ ಆಗಮಿಸಿದ್ದ ಜನರಿಗೆ ಮಜ್ಜಿಗೆ, ಹಣ್ಣಿನ ಪಾನಕ ನೀಡಲಾಯಿತು.