ಕೋಮುವಾದಿಗಳಿಂದ ಸಂವಿಧಾನದ ಆತ್ಮವಧೆ; ಅಂಬೇಡ್ಕರ್ ಆಶಯಗಳಿಗೆ ಧಕ್ಕೆ ತರುವ ಯತ್ನ: ಬಿ.ಆರ್.ಜಯಂತ್ ಹೇಳಿಕೆ

SGRRRRRR WEEBBBB
Published on

ಸಾಗರ: ಸಂವಿಧಾನದ ಆತ್ಮವನ್ನೆ ಕೊಲ್ಲುವ ಕೆಲಸವನ್ನು ಕೋಮುವಾದಿಗಳು ಮಾಡುತ್ತಿದ್ದಾರೆ. ಈ ಮೂಲಕ ಡಾ. ಬಿ.ಆರ್. ಅಂಬೇಡ್ಕರ್ ಅವರ ಆಶಯಕ್ಕೆ ಧಕ್ಕೆ ತರುವ ಕೆಲಸ ನಡೆದಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಆರ್.ಜಯಂತ್ ಆರೋಪಿಸಿದರು.

ನಗರಸಭೆ ಆವರಣದಲ್ಲಿ ಮಂಗಳವಾರ ಡಾ. ಬಿ.ಆರ್.ಅಂಬೇಡ್ಕರ್ ಪರಿನಿರ್ವಾಣ ದಿನದ ಅಂಗವಾಗಿ ಬ್ಲಾಕ್ ಕಾಂಗ್ರೆಸ್ ಪರಿಶಿಷ್ಟ ವಿಭಾಗದಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಪ್ರಸ್ತುತದ ದಿನಗಳಲ್ಲಿ ದೇಶದ ಸ್ಥಿತಿ ದುರಂತದತ್ತ ಸಾಗುತ್ತಿದೆ. ಅಂಬೇಡ್ಕರ್ ದೇಶಕ್ಕೆ ಕೊಟ್ಟ ಸಂವಿಧಾನವನ್ನೆ ಪ್ರಶ್ನಿಸುವ ಮನಸ್ಥಿತಿ ಹೆಚ್ಚಾಗುತ್ತಿರುವುದು ಆತಂಕಕಾರಿ ಸಂಗತಿ. ಸಮಾನತೆ, ಅಸ್ಪಶ್ಯತೆ ನಿವಾರಣೆ, ಪರಸ್ಪರ ಸೌಹಾರ್ದತೆಗಾಗಿ ಅರ್ಥವತ್ತಾದ ಪ್ರಜಾಪ್ರಭುತ್ವ ಇರಬೇಕು ಎಂದು ಅಂಬೇಡ್ಕರ್ ಸಂವಿಧಾನ ರಚನೆ ಮಾಡಿಕೊಟ್ಟಿದ್ದಾರೆ. ಕೃತಕವಾಗಿ ಅಂಬೇಡ್ಕರ್ ಬಗ್ಗೆ ಮಾತನಾಡುತ್ತಿರುವುದು ದೇಶದ ದುರಂತ. ಸಂವಿಧಾನದ ಮೂಲ ಆಶಯಗಳನ್ನು ಪ್ರತಿಪಾದಿಸುವಲ್ಲಿ ಪ್ರತಿಯೊಬ್ಬರೂ ಪಣತೊಡಬೇಕು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net