ಮೈಸೂರು: ಜಿಲ್ಲಾ ವ್ಯಾಪ್ತಿಯಲ್ಲಿ ಜು. 11ರಿಂದ 15ರವರೆಗೆ ಪ್ರಾಥಮಿಕ ಶಾಲಾ ಶಿಕ್ಷಕರು ಹಾಗೂ ಜು.13 ಮತ್ತು 14 ರಂದು ಪ್ರೌಢಶಾಲಾ ಸಹ ಶಿಕ್ಷಕರು ಹಾಗೂ ತತ್ಸಮಾನ ವೃಂದ ಶಿಕ್ಷಕರ ಕೋರಿಕೆ ವರ್ಗಾವಣೆ ಕೌನ್ಸೆಲಿಂಗ್ ಹಮ್ಮಿಕೊಳ್ಳಲಾಗಿದೆ. ಕೌನ್ಸೆಲಿಂಗ್ ಕಾರ್ಯವನ್ನು ಉಪನಿರ್ದೇಶಕರ ಕಚೇರಿಯ ಆವರಣದಲ್ಲಿ ಪ್ರತಿದಿನ ಬೆಳಗ್ಗೆ 9 ಗಂಟೆಯಿಂದ ನಡೆಸಲಾಗುವುದು ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಚ್.ಕೆ.ಪಾಂಡು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.