ಕೋಲಿ-ಕಬ್ಬಲಿಗ ಎಸ್ಟಿಗೆ ಸೇರಿಸದ ಬಿಜೆಪಿಗೆ ತಕ್ಕ ಪಾಠ ಕಲಿಸಿದ್ದೇವೆ: ಲಚ್ಚಪ್ಪ ಜಮಾದಾರ

IMG-20230516-WA0019
Published on

Post Settings

ಕಲಬುರಗಿ : ಕೋಲಿ ಕಬ್ಬಲಿಗ ಸಮಾಜವನ್ನು ಎಸ್ಟಿಗೆ ಸೇರ್ಪಡೆ ಮಾಡುವ ಭರವಸೆ ಕೊಟ್ಟ ಬಿಜೆಪಿ ಈಡೇರಿಸದಿರುವುದರಿಂದಲೇ ವಿಧಾನಸಭಾ ಚುನಾವಣೆಯಲ್ಲಿ ಸಮುದಾಯ ಕಾಂಗ್ರೆಸ್ ಗೆ ಮತ ನೀಡಿ ಬಿಜೆಪಿಗೆ ತಕ್ಕ ಪಾಠ ಕಲಿಸಿದೆ ಎಂದು ಕರ್ನಾಟಕ ರಾಜ್ಯ ಕೋಲಿ ಕಬ್ಬಲಿಗ ಎಸ್ಟಿ ಹೋರಾಟ ಸಮಿತಿ ರಾಜ್ಯಾಧ್ಯಕ್ಷ ಲಚ್ಚಪ್ಪ ಜಮಾದಾರ ಹೇಳಿದರು.

ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2018ರ ವಿಧಾನಸಭಾ ಹಾಗೂ 2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನಾಯಕರು ಕೋಲಿ ಕಬ್ಬಲಿಗ ಸಮಾಜವನ್ನು ಎಸ್ಟಿಗೆ ಸೇರ್ಪಡೆ ಮಾಡುತ್ತೇವೆ ಎಂದು ಭರವಸೆ ನೀಡಿದರು. ಅಲ್ಲದೇ ಪ್ರಧಾನಿ ನರೇಂದ್ರ ಮೋದಿ ಅವರು ಕೋಲಿ ಸಮಾಜವನ್ನು ನೆನಪಿನಲ್ಲಿ ಇಡುವುದಾಗಿ ಹೇಳಿದರು. ಆದರೆ ಇಲ್ಲಿಯ ವರೆಗೂ ಕೊಟ್ಟ ಮಾತು ಈಡೇರಿಸಿಲ್ಲ ಎಂದು ಆರೋಪಿಸಿದರು.

ನಮ್ಮ ಬೇಡಿಕೆಯನ್ನು ಮುಂಬರುವ ತಾಲೂಕು ಪಂಚಾಯತ್, ಜಿಲ್ಲಾ ಪಂಚಾಯತ್ ಹಾಗೂ 2024ರ ಲೋಕಸಭಾ ಚುನಾವಣೆಯ ಒಳಗಾಗಿಯೇ ಈಡೇರಿಸಬೇಕು. ಇಲ್ಲದಿದ್ದರೆ ಬಿಜೆಪಿ ಹಠಾವೊ ಅಭಿಯಾನ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು. ಸುದ್ದಿಗೋಷ್ಠಿಯಲ್ಲಿ ಶಿವು ಧಣಿ, ಗುರು ಕರಾಟೆ, ದೇವಿಂದ್ರ ಜಮಾದಾರ ಸೇರಿದಂತೆ ಮತ್ತಿತ್ತರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net