ಕೋಲಿ ಕಬ್ಬಲಿಗ ಸಮಾವೇಶ 25ರಂದು

ningapp devanaganv
Published on

ಕಲಬುರಗಿ: ಕೋಲಿ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕು ಎಂಬುದು ಸೇರಿ ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ, ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲು, ಮುಖ್ಯಮಂತ್ರಿ ನೇತೃತ್ವದಲ್ಲಿ ಕೇಂದ್ರಕ್ಕೆ ನಿಯೋಗ ಕೊಂಡ್ಯೊಯ್ದು ಮನವೊಲಿಸಲು ಫೆ.೨೫ರಂದು ರಾಜ್ಯಮಟ್ಟದ ಕೋಲಿ ಕಬ್ಬಲಿಗ ಸಮಾವೇಶವನ್ನು ಫೆ.೨೫ರಂದು ನಗರದ ನೂತನ ವಿದ್ಯಾಲಯ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಕೋಲಿ ಸೈನ್ಯ ಅಧ್ಯಕ್ಷ ನಿಂಗಪ್ಪ ದೇವಣಗಾಂವ ತಿಳಿಸಿದರು.

ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ ನೇತೃತ್ವದಲ್ಲಿ ಸಮಾವೇಶವನ್ನು ಸಂಘಟಿಸುತ್ತಿದ್ದು, ಎಐಸಿಸಿ ಅಧ್ಯಕ್ಷ ಡಾ.ಮಲ್ಲಿಕಾರ್ಜುನ ಖರ್ಗೆ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ ಪಾಲ್ಗೊಳ್ಳಲಿದ್ದಾರೆ. ಸಚಿವರಾದ ಪ್ರಿಯಾಂಕ್ ಖರ್ಗೆ, ಶರಣಬಸಪ್ಪ ದರ್ಶನಾಪುರ, ಡಾ.ಶರಣಪ್ರಕಾಶ ಪಾಟೀಲ್, ಸಿಎಂ ಸಲಹೆಗಾರ ಬಿ.ಆರ್.ಪಾಟೀಲ್ ಸೇರಿ ಜಿಲ್ಲೆ ಸೇರಿ ವಿವಿಧೆಡೆಯ ಜನಪ್ರತಿನಿಧಿಗಳು, ಸಚಿವರು ಪಾಲ್ಗೊಳ್ಳಲಿದ್ದಾರೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಲಕ್ಷ್ಮೀಪುತ್ರ ಎಸ್. ತಳವಾರ, ಶರಣು ಜಮಾದಾರ, ಮಹೇಶ ಬಿದನೂರ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net