ಕೋಲಿ ಸಮಾಜ ಎಸ್.ಟಿ.ಗೆ ಸೇರ್ಪಡೆಗೊಳಿಸಿ

03ydg03
Published on

ಯಾದಗಿರಿ: ರಾಜ್ಯದಲ್ಲಿನ ಬಹುಸಂಖ್ಯಾತ ಕೋಲಿ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆಗೊಳಿಸಲು ರಾಜ್ಯ ಮತ್ತು ಕೇಂದ್ರ ಸರಕಾರ ನಿರ್ಲಕಿ್ಷೃಸುತ್ತಿದೆ ಎಂದು ಟೋಕರಿ ಕೋಲಿ ಸಮಾಜದ ಸಂಘಟನಾ ಪ್ರಮುಖ ಉಮೇಶ ಮುದ್ನಾಳ್ ಆರೋಪಿಸಿದರು.

ಭಾನುವಾರ ನಗರದ ಸಮಾಜದ ಕಚೇರಿಯಲ್ಲಿ ಆಯೋಜಿಸಿದ್ದ ಹಿರಿಯ ಮುತ್ಸದ್ದಿ ದಿ.ವಿಠ್ಠಲ್ ಹೇರೂರ ಅವರ 10ನೇ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ಹೇರೂರು ಕಂಡಿದ್ದ ಕನಸುಗಳನ್ನು ನಾವೆಲ್ಲರೂ ನನಸು ಮಾಡಲು ಮುಂದಾಗಬೇಕಿದೆ. ತಮ್ಮ ಜೀವಿತದ ಕೊನೆ ಕ್ಷಣದವರೆಗೂ ಸಮಾಜದ ಬಗ್ಗೆ ಚಿಂತಿಸದ ಚೇತನರಾಗಿದ್ದಾರೆ ಎಂದರು.

ದೇಶಕ್ಕೆ ಸ್ವಾತಂತ್ರೃ ಬಂದ ನಂತರ ಆಳಿದ ಎಲ್ಲ ಪಕ್ಷಗಳು ನಮ್ಮ ಸಮಾಜವನ್ನು ರಾಜಕೀಯವಾಗಿ ಬಳಸಿಕೊಂಡಿವೆ. ಯಾರೂ ಸಹ ನಮ್ಮ ನೋವಿಗೆ ಸ್ಪಂದಿಸಿಲ್ಲ. ಪ್ರಸ್ತುತ ಚಳಿಗಾಲದ ಅಧಿವೇಶನದಲ್ಲಿ ಸರಕಾರ ಈ ಬಗ್ಗೆ ಗಂಭೀರವಾಗಿ ಚಚರ್ಿಸಿ ಕೋಲಿ ಸಮಾಜ ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡಬೇಕು. ಇಲ್ಲದಿದ್ದರೆ ಮುಂದಿನ ಲೋಕಸಭೆ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net