ಕೋಲಿ ಸಮಾಜಕ್ಕೆ ಅನ್ಯಾಯ

Ambigara Chowdaiah
Published on

ಕಲಬುರಗಿ: ಕಳೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಉಮೇಶ ಜಾಧವ್ ಸೇರಿ ಎಲ್ಲ ಬಿಜೆಪಿ ಮುಖಂಡರು ಕೋಲಿ ಸಮಾಜವನ್ನು ಎಸ್‌ಟಿಗೆ ಸೇರ್ಪಡೆ ಮಾಡುತ್ತೇನೆ ಎಂದು ಹೇಳಿ ಮತ ಪಡೆದಿದ್ದರು. ಆದರೆ ಈಡೇರಿಸುವಲ್ಲಿ ವಿಫಲರಾಗಿದ್ದಾರೆ ಎಂದು ಕೋಲಿ ಕಬ್ಬಲಿಗ ಎಸ್‌ಟಿ ಹೋರಾಟ ಸಮಿತಿ ಅಧ್ಯಕ್ಷ ಲಚ್ಚಪ್ಪ ಜಮಾದಾರ ತಿಳಿಸಿದರು. ಗುಲ್ಬರ್ಗ ಲೋಕಸಭೆ ಕ್ಷೇತ್ರದಲ್ಲಿ ಸಮಿತಿಯಿಂದ ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಅವರನ್ನು ಬೆಂಬಲಿಸಲಾಗುತ್ತಿದೆ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು. ಇದೀಗ ಸುಳ್ಳುಗಳನ್ನು ಹೇಳಿ ಮತ ಪಡೆಯಲು ಯತ್ನಿಸುತ್ತಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರ ಮೇಲೆ ಗೂಬೆ ಕೂರಿಸುತ್ತಿದ್ದಾರೆ. ಈ ಬಾರಿ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಾಗುವುದು ಎಂದರು. ಉಮೇಶ ಕುರಿಕೋಟಾ, ಅಂಬಾರಾಯ ಜವಳಗಾ, ಶಿವರಾಜ ಇಂಚಗೇರಿ, ಭೀಮಶಾ ಖನ್ನಾ, ದೇವಿಂದ್ರ ಜಮಾದಾರ, ವಿಜಯಕುಮಾರ ಜಮಾದಾರ, ನಾಗೇಂದ್ರ ನಿಂಗಮಪಳ್ಳಿ, ಸಂಜುಕುಮಾರ ನಾಟೀಕಾರ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net