ಕೌನ್ಸಿಲರ್ ಚುನಾವಣೆ ವೇಳಾಪಟ್ಟಿ ಪ್ರಕಟ : ಮತದಾರರ ನೋಂದಣಿಗೆ ವಿಶೇಷ ಅಭಿಯಾನ

Published on

ವಿಜಯವಾಣಿ ಸುದ್ದಿಜಾಲ ಕಲಬುರಗಿ

ಕೇಂದ್ರ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ನಡೆಸಲಾಗುತ್ತಿದ್ದು, ಅರ್ಹ ಮತದಾರರನ್ನು ಸೇರ್ಪಡೆಗೊಳಿಸುವ ಸಂಬAಧ ನವೆಂಬರ್ ೯, ೧೦, ೨೩ ಹಾಗೂ ೨೪ರಂದು ಜಿಲ್ಲೆಯಾದ್ಯಂತ ಮತದಾರರ ನೋಂದಣಿಗೆ ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿಯೂ ಆದ ಜಿಲ್ಲಾ ಚುನಾವಣಾಧಿಕಾರಿ ಬಿ.ಫೌಜಿಯಾ ತರನ್ನುಮ್ ತಿಳಿಸಿದ್ದಾರೆ.

ಮತದಾರರ ಪರಿಷ್ಕರಣೆ ಸಂಬAಧ ಅಕ್ಟೋಬರ್ ೨೯ರಂದು ಕರಡು ಮತದಾರರ ಪಟ್ಟಿ ಜಿಲ್ಲೆಯ ೯ ವಿಧಾನಸಭಾ ಮತಕ್ಷೇತ್ರಗಳ ನಿಗದಿತ ಸ್ಥಳಗಳಲ್ಲಿ ಪ್ರಕಟಿಸಲಾಗಿದೆ ಎಂದು ತಿಳಿಸಿದ್ದಾರೆ.

ಜಿಲ್ಲೆಯ ೨,೪೦೦ ಮತಗಟ್ಟೆ ಕೇಂದ್ರಗಳಲ್ಲಿ ಮತದಾರರ ಪಟ್ಟಿಯ ವಿಶೇಷ ನೊಂದಣಿ ಅಭಿಯಾನ ಏರ್ಪಡಿಸಲಾಗಿದ್ದು, ಈ ಅಭಿಯಾನದಲ್ಲಿ ಯುವ ಮತದಾರರು ಮತ್ತು ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸದಿರುವ ಅರ್ಹ ಮತದಾರರು ತಮ್ಮ ಮತಗಟ್ಟೆ ಕೇಂದ್ರಗಳಿಗೆ ತೆರಳಿ ನಮೂನೆ-೬ರಲ್ಲಿ ಅರ್ಜಿ ಭರ್ತಿ ಮಾಡಿ ಅದರೊಂದಿಗೆ ಅಗತ್ಯ ದಾಖಲೆಗಳನ್ನು ಮತಗಟ್ಟೆ ಅಧಿಕಾರಿಗಳಿಗೆ ಸಲ್ಲಿಸಿ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಬೇಕೆAದು ಮನವಿ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net