ಕೌಶಲಗಳ ಕಲಿಕೆಗೆ ಒತ್ತು ನೀಡಿ

CTD BAPUJI
Published on

ಚಿತ್ರದುರ್ಗ: ಸ್ಪರ್ಧಾತ್ಮಕ ಯುಗದಲ್ಲಿ ಎದುರಾಗುವ ಪೈಪೋಟಿಯನ್ನು ಎದುರಿಸುವ ಸಾಮರ್ಥ್ಯ ಬೆಳೆಸಿಕೊಳ್ಳುವಂತೆ ಸಂಸದ ಗೋವಿಂದ ಎಂ.ಕಾರಜೋಳ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ನಗರದ ಬಾಪೂಜಿ ಸಮೂಹ ಸಂಸ್ಥೆ ಕೆಎಂಎಸ್ ಪ್ರಥಮ ದರ್ಜೆ ಕಾಲೇಜ್‌ಲ್ಲಿ ಶುಕ್ರವಾರ ಆಯೋಜಿಸಿದ್ದ ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಪದವಿ ಪ್ರಧಾನ ಸಮಾರಂಭದಲ್ಲಿ ಮಾತನಾಡಿದರು.
ಶಿಕ್ಷಣದ ಜತೆಗೆ ಸ್ಪರ್ಧೆ ಎದುರಿಸುವ ಮೂಲಕ ಜೀವನದಲ್ಲಿ ಯಶಸ್ಸನ್ನು ಸಾಧಿಸಬೇಕಿದೆ. ಅದಕ್ಕಾಗಿ ಪಠ್ಯದ ಜತೆ ಅಗತ್ಯವಿರುವ ಕೌಶಲಗಳ ಕಲಿಕೆಗೂ ಒತ್ತು ನೀಡಬೇಕಿದೆ ಎಂದರು.
ಸಂಸ್ಥೆ ಕಾರ‌್ಯದರ್ಶಿ ಡಾ.ಕೆ.ಎಂ.ವೀರೇಶ್ ಮಾತನಾಡಿ, ಪದವಿ ಪಡೆದ ವಿದ್ಯಾರ್ಥಿಗಳು ಇನ್ನೂ ಹೆಚ್ಚಿನ ಶಿಕ್ಷಣವನ್ನು ಪಡೆಯಲು ಆದ್ಯತೆ ನೀಡಬೇಕು. ದೇಶಕ್ಕೆ ಸೇವೆಗೂ ಸಜ್ಜಾಗಬೇಕು ಎಂದು ತಿಳಿಸಿದರು.
ಸಂಸ್ಥೆ ನಿರ್ದೇಶಕ ಕೆ.ಎಂ.ಚೇತನ್, ಸಹ ನಿರ್ದೇಶಕಿ ಮೇಘನಾ ಚೇತನ್, ಪ್ರಾಚಾರ‌್ಯರಾದ ಡಾ.ಕೆ.ಮಂಜುಳಾ, ಜಿ.ಎನ್.ವೀರೇಶ್, ಬಿಜೆಪಿ ಜಿಲ್ಲಾ ವಕ್ತಾರ ನಾಗರಾಜ್ ಬೇಂದ್ರೆ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net