ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಜಿ

Published on

ತುಮಕೂರು: ಪ್ರವಾಸೋದ್ಯಮ ಇಲಾಖೆ ವತಿಯಿಂದ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ನೀಡಲಾಗುವ 1 ತಿಂಗಳ ವಸತಿ ಸಹಿತ ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಜಿ ಸಲ್ಲಿಸುವ ಅವಧಿಯನ್ನು ಫೆ.20ರ ವರೆಗೆ ವಿಸ್ತರಿಸಲಾಗಿದೆ.

ನಿಗಧಿತ ಅರ್ಜಿ ನಮೂನೆಯನ್ನು ಜಿಲ್ಲಾ ಮಟ್ಟದ ಪ್ರವಾಸೋದ್ಯಮ ಕಚೇರಿಯಲ್ಲಿ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ತಹಸೀಲ್ದಾರರಿಂದ ಪಡೆದುಕೊಂಡಿರುವ ಚಾಲ್ತಿಯಲ್ಲಿರುವ ಜಾತಿ/ಆದಾಯ ಪ್ರಮಾಣಪತ್ರ, ಖಾಯಂ ಲಘು ವಾಹನ ಚಾಲನಾ ಪರವಾನಗಿ, ಎಸ್​.ಎಸ್​.ಎಲ್​.ಸಿ. ಅಂಕಪಟ್ಟಿ, ಆಧಾರ್​ ಕಾರ್ಡ್​, ಯಾವುದೇ ಸರ್ಕಾರಿ ಇಲಾಖೆ/ನಿಗಮ/ಮಂಡಳಿಗಳಲ್ಲಿ ಖಾಯಂ ನೌಕರಿಯಲ್ಲಿರದ ಬಗ್ಗೆ ಸ್ವಯಂ ಪ್ರಮಾಣೀಕರಿಸಿ 50ರೂ. ಬೆಲೆಯ ಛಾಪಾಕಾಗದದಲ್ಲಿ ನಮೂನೆ-3ರಲ್ಲಿ ಪ್ರಮಾಣಪತ್ರ ಲಗತ್ತಿಸಬೇಕು.

ಅಗತ್ಯ ದಾಖಲೆಗಳನ್ನು ಸ್ವಯಂ ದೃಢೀಕರಿಸಿ ದ್ವಿಪ್ರತಿಯಲ್ಲಿ ಫೆಬ್ರವರಿ 20ರೊಳಗಾಗಿ ಸಹಾಯಕ ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ, ರೆಡ್​ಕ್ರಾಸ್​ ಭವನ, 1ನೇ ಮಹಡಿ, ಕೊಠಡಿ ಸಂಖ್ಯೆ: ಎಫ್​ 232, ಅಶೋಕ ರಸ್ತೆ, ತುಮಕೂರು. ಇವರಿಗೆ ಸಲ್ಲಿಸಬಹುದು.

ಮಾಹಿತಿಗೆ ದೂ.0816 -2006349 ಸಂಪರ್ಕಿಸಿ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net