ಕ್ಯಾಂಟರ್ ಡಿಕ್ಕಿಯಾಗಿ ಸ್ಕೂಟರ್ ಸವಾರ ಸಾವು

Published on

ಅರಕಲಗೂಡು: ಪಟ್ಟಣದ ಹೊರವಲಯ ಹಾಸನ ರಸ್ತೆಯಲ್ಲಿ ಸೋಮವಾರ ರಾತ್ರಿ ಕ್ಯಾಂಟರ್ ವಾಹನ ಮತ್ತು ಸ್ಕೂಟರ್ ನಡುವೆ ಡಿಕ್ಕಿ ಸಂಭವಿಸಿ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.


ತಾಲೂಕಿನ ಇಲ್ಲಹಳ್ಳಿ ಗ್ರಾಮದ ರಾಚಯ್ಯ (35) ಮೃತರು. ಇವರು ರಾಮನಾಥಪುರ ಸಾರಿಗೆ ಡಿಪೋದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಚಾಲಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಕರ್ತವ್ಯ ಮುಗಿಸಿ ಹಾಸನಕ್ಕೆ ತೆರಳುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಪಟ್ಟಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net