

ವಿಜಯವಾಣಿ ಸುದ್ದಿಜಾಲ ಧಾರವಾಡ
ನಗರದ ಲಿಂಗಾಯತ ವಿದ್ಯಾಭಿವೃದ್ಧಿ ಸಂಸ್ಥೆಯ ಅವ್ವಪ್ಪಣ್ಣ ಅತ್ತಿಗೇರಿ ಕೈಗಾರಿಕಾ ತರಬೇತಿ ಸಂಸ್ಥೆ ಹಾಗೂ ಕನೆಕ್ಟ್ ಧಾರವಾಡ ಸಹಯೋಗದಲ್ಲಿ ಅಂತರಾಷ್ಟ್ರೀಯ ಉತ್ಪಾದನಾ ವಲಯದಲ್ಲಿ ಬೆಂಗಳೂರಿನ ಹಲವು ಕಂಪನಿಗಳ ವಿವಿಧ ಹುದ್ದೆಗಳಿಗೆ ಎಸ್ಸೆಸ್ಸೆಲ್ಸಿ, ಪಿಯುಸಿ ಹಾಗೂ ಪದವಿ ಪಾಸಾದ 18 ರಿಂದ 25 ವಯಸ್ಸಿನ ಯುವಕರಿಗೆ ಜೂ. 5ರಂದು ಬೆಳಗ್ಗೆ 9 ಗಂಟೆಗೆ ಕ್ಯಾಂಪಸ್ ಸಂದರ್ಶನ ಏರ್ಪಡಿಸಲಾಗಿದೆ. ಹೆಚ್ಚಿನ ಮಾಹಿತಿಗೆ ಇಲ್ಲಿನ ಟೌನ್ಹಾಲ್ ಆವರಣದಲ್ಲಿನ ಅವ್ವಪ್ಪಣ್ಣ ಅತ್ತಿಗೇರಿ ಕೈಗಾರಿಕಾ ತರಬೇತಿ ಸಂಸ್ಥೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.