ಕ್ಯಾತನಹಳ್ಳಿ ಗ್ರಾಪಂ ಅಧ್ಯಕ್ಷರಾಗಿ ಚಿದಾನಂದ್ ಆಯ್ಕೆ

9-pnp 3
ಪಾಂಡವಪುರ ತಾಲೂಕಿನ ಕ್ಯಾತನಹಳ್ಳಿ ಗ್ರಾಪಂ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಚಿದಾನಂದ ಅವರನ್ನು ಸಹ ಸದಸ್ಯರು ಮತ್ತು ರೈತಸಂಘ ಮುಖಂಡರು ಅಭಿನಂದಿಸಿದರು.
Published on

ಪಾಂಡವಪುರ: ತಾಲೂಕಿನ ಕ್ಯಾತನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ರೈತಸಂಘ ಬೆಂಬಲಿತ ಅಭ್ಯರ್ಥಿ ಚಿದಾನಂದ್ ಅವಿರೋಧವಾಗಿ ಆಯ್ಕೆಯಾದರು.

ಅಧಿಕಾರ ಒಡಂಬಡಿಕೆ ಸೂತ್ರದನ್ವಯ ವಿನಾಯಕ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರಿಂದ ತೆರವಾಗಿದ್ದ ಸ್ಥಾನಕ್ಕೆ ಬುಧವಾರ ಚುನಾವಣೆ ಪ್ರಕ್ರಿಯೆ ನಡೆಯಿತು. ಒಟ್ಟು 20 ಸದಸ್ಯರ ಸಂಖ್ಯೆ ಬಲವಿರುವ ಪಂಚಾಯಿತಿಯಲ್ಲಿ ಎಲ್ಲ ಸ್ಥಾನಗಳಲ್ಲೂ ರೈತಸಂಘ ಬೆಂಬಲಿತ ಅಭ್ಯರ್ಥಿಗಳೇ ಗೆಲುವು ಸಾಧಿಸಿದ್ದಾರೆ. ಅಧ್ಯಕ್ಷ ಗಾದಿಗೆ ಚಿದಾನಂದ್ ಹೊರತುಪಡಿಸಿ ಯಾರೊಬ್ಬರೂ ನಾಮಪತ್ರ ಸಲ್ಲಿಸಿರಲಿಲ್ಲ. ಈ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿಯಾಗಿ ಆಗಮಿಸಿದ್ದ ತಾಪಂ ಇಒ ಅವರು ಅವಿರೋಧ ಆಯ್ಕೆಯನ್ನು ಘೋಷಣೆ ಮಾಡಿದರು.

ಅಧ್ಯಕ್ಷರ ಆಯ್ಕೆ ಘೋಷಣೆಯಾಗುತ್ತಿದ್ದಂತೆ ರೈತಸಂಘ ಕಾರ್ಯಕರ್ತರು ಮತ್ತು ಬೆಂಬಲಿಗರು ಪಟಾಕಿ ಸಿಡಿಸಿ ಸಿಹಿ ವಿತರಿಸಿ ಸಂಭ್ರಮಿಸಿದರು. ರೈತನಾಯಕಿ ಸುನೀತಾ ಪುಟ್ಟಣ್ಣಯ್ಯ, ರೈತಸಂಘ ಮುಖಂಡರಾದ ಗೌಡೇಗೌಡ, ಮಹದೇವು, ನಂದೀಶ್, ಚಂದ್ರಶೇಖರ್, ಲೋಕೇಶ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net