

ಚಿತ್ರದುರ್ಗ: ನಗರದ ಜಿಲ್ಲಾಸ್ಪತ್ರೆಯ ಬಿ.ಸಿ.ರಾಯ್ ಸಭಾಂಗಣದಲ್ಲಿ ಸೆ.20ರ ಬೆಳಗ್ಗೆ 10 ರಿಂದ ಕ್ಯಾನ್ಸರ್ ಉಚಿತ ತಪಾಸಣೆ ಶಿಬಿರ ಏರ್ಪಡಿಸಲಾಗಿದೆ ಎಂದು ದಾವಣಗೆರೆ ವಿಶ್ವಾರಾಧ್ಯ ಕ್ಯಾನ್ಸರ್ ಆಸ್ಪತ್ರೆ ಮತ್ತು ಸಂಶೋಧನಾ ಸಂಸ್ಥೆಯ ವೈದ್ಯ ಡಾ.ವಿಘ್ನೇಶ್ ಹೇಳಿದರು. ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪ್ರಸ್ತುತ ಜನರು ನಾನಾ ವಿಧದ ಕ್ಯಾನ್ಸರ್‌ಗೆ ತುತ್ತಾಗುತ್ತಿದ್ದಾರೆ. ಈ ಕಾಯಿಲೆ ಗುಣಪಡಿಸಲು ಅಧುನಿಕ ತಂತ್ರಜ್ಞಾನ ನೆರವಾಗಿದೆ. ಶಿಬಿರದಲ್ಲಿ ಪ್ರಾರಂಭಿಕ ತಪಾಸಣೆ ನಡೆಸಿ ಹೆಚ್ಚಿನ ಚಿಕಿತ್ಸೆಗೆ ಸಂಸ್ಥೆಗೆ ಕಳುಹಿ ಸಲಾಗುವುದು. ಸಾರ್ವಜನಿಕರು ಶಿಬಿರದ ಪ್ರಯೋಜನ ಪಡೆದುಕೊಳ್ಳಬೇಕು. ಹೆಸರು ನೋಂದಣಿಗೆ ಮೊಬೈಲ್ ಸಂಖ್ಯೆ 9844458881/97425 5516ನ್ನು ಸಂಪರ್ಕಿಸಬಹುದು ಎಂದರು. ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಎಸ್.ಪಿ.ರವೀಂದ್ರ, ಶಿಬಿರದ ಸಂಚಾಲಕ ರಾಘವೇಂದ್ರ ಇದ್ದರು.