ಕ್ಯಾನ್ಸರ್ ಬಗ್ಗೆ ವ್ಯಾಪಕ ಜಾಗೃತಿ ಅಗತ್ಯ - ಡಾ.ದೇವದಾಸ ರೈ

mng-29nov-balmata college
Published on



ಮಂಗಳೂರು : ಕ್ಯಾನ್ಸರ್ ಬಗ್ಗೆ ಜನರಲ್ಲಿ ವ್ಯಾಪಕವಾದ ಜಾಗೃತಿ ಮೂಡಿಸುವ ಅಗತ್ಯವಿದೆ. ಇದರಿಂದ ಕ್ಯಾನ್ಸರ್‌ನಿಂದ ಉಂಟಾಗುವ ಸಾವಿನ ಪ್ರಮಾಣವನ್ನು ತಗ್ಗಿಸಬಹುದು .ಗರ್ಭ ಕಂಠದ ಕ್ಯಾನ್ಸರ್ ಸಹಿತ ವಿವಿಧ ಮಾದರಿಯ ಕ್ಯಾನ್ಸರ್ ಲಕ್ಷಣಗಳನ್ನು ಆರಂಭಿಕ ಹಂತದಲ್ಲಿ ಪತ್ತೆ ಹಚ್ಚಿದರೆ ಗುಣ ಪಡಿಸಲು ಸಾಧ್ಯವಿದೆ ಎಂದು ಡಾ.ದೇವದಾಸ ರೈ ಹೇಳಿದರು.
ನಗರದ ಬಲ್ಮಠ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ರೋಟರಿ ಕ್ಲಬ್ ಸೆಂಟ್ರಲ್ ಮಂಗಳೂರು, ದ.ಕ.ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ,ಬಲ್ಮಠ ಸರ್ಕಾರಿ ಮಹಿಳಾ ಪ್ರಥಮದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಸಹಯೋಗದಲ್ಲಿ ನಡೆದ ಗರ್ಭ ಕಂಠದ ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಸ್ತ್ರೀ ರೋಗ ತಜ್ಞೆ ಡಾ.ಅಪೇಕ್ಷಾ ಅವರು ಕ್ಯಾನ್ಸರ್ ಹರಡುವ ವಿಧಾನ ಮತ್ತು ಪತ್ತೆ ಹಚ್ಚುವ ವಿಧಾನಗಳ ಬಗ್ಗೆ ವಿದ್ಯಾರ್ಥಿನಿ ಯರಿಗೆ ಮಾಹಿತಿ ನೀಡಿದರು. ಕಾಲೇಜಿನ ಪ್ರಾಂಶುಪಾಲ ಜಗದೀಶ್ ಬಾಳ ಅಧ್ಯಕ್ಷತೆ ವಹಿಸಿದ್ದರು.
ಉದ್ಘಾಟನಾ ಸಮಾರಂಭದಲ್ಲಿ ರೋಟರಿ ಜಿಲ್ಲೆ 3181ಇದರ ಅಸಿಸ್ಟೆಂಟ್ ಗವರ್ನರ್ ಕೃಷ್ಣ ಹೆಗ್ಡೆ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ,ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ, ಕೋಶಾಧಿಕಾರಿ ಪುಷ್ಪರಾಜ್.ಬಿ.ಎನ್., ರೋಟರಿ ಕ್ಲಬ್ ಸೆಂಟ್ರಲ್ ಮಂಗಳೂರು ಅಧ್ಯಕ್ಷ ಬ್ರಾಯನ್ ಪಿಂಟೊ, ಕಾರ್ಯದರ್ಶಿ ರಾಜೇಶ್ ಸೀತಾರಾಮ್ , ಸದಸ್ಯರಾದ ಪ್ರದೀಪ್ ಕುಲಾಲ್ ,ಜಗನ್ನಾಥ ಶೆಟ್ಟಿ, ಜ್ಯಾಕ್ಸನ್ ಸಲ್ದಾನ, ಎನ್‌ಎಸ್‌ಎಸ್ ಘಟಕದ ಅಧಿಕಾರಿ ಡಾ.ಮೀನಾಕ್ಷಿ ಆಚಾರ್ಯ, ವಿದ್ಯಾರ್ಥಿ ಕಾರ್ಯದರ್ಶಿಗಳಾದ ಹೃಷಿಕಾ ಮತ್ತು ಕೃಪಾಶ್ರೀ ಉಪಸ್ಥಿತರಿದ್ದರು. ಉಪನ್ಯಾಸಕಿ ಡಾ.ಸುಮನಾ ವಂದಿಸಿದರು. ಧನ್ಯಶ್ರೀ ಮತ್ತು ವರ್ಷಿತಾ ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net