ಕ್ಯಾನ್ಸರ್‌ಗೆ ಆರಂಭಿಕ ಹಂತದಲ್ಲೇ ಚಿಕಿತ್ಸೆ ಪಡೆದರೆ ವಾಸಿ

bhr cancer
ಬಾಳೆಹೊನ್ನೂರಿನ ಜೆಸಿಐನಿಂದ ಎಸ್‌ಜೆಆರ್ ಕಾಲೇಜಿನಲ್ಲಿ ಕ್ಯಾನ್ಸರ್ ಜಾಗೃತಿ ಅಭಿಯಾನವನ್ನು ರೋಟರಿ ಮಾಜಿ ಅಧ್ಯಕ್ಷ ಇಬ್ರಾಹಿಂ ಉದ್ಘಾಟಿಸಿದರು. ಇಬ್ರಾಹಿಂ ಶಾಫಿ, ಪಿ.ಪಿ.ಬೇಬಿ, ಕೆ.ಆರ್.ಬೂದೇಶ್, ಶಶಿಧರ್ ಇತರರಿದ್ದರು.
Published on

ಬಾಳೆಹೊನ್ನೂರು: ವಿಶ್ವದೆಲ್ಲೆಡೆ ವ್ಯಾಪಕವಾಗಿ ಹರಡುತ್ತಿರುವ ಕ್ಯಾನ್ಸರ್ ಬಗ್ಗೆ ಪ್ರತಿಯೊಬ್ಬರೂ ಎಚ್ಚರಿಕೆ ವಹಿಸಬೇಕು ಎಂದು ಆರೋಗ್ಯ ನಿರೀಕ್ಷಣಾಧಿಕಾರಿ ಪಿ.ಪಿ.ಬೇಬಿ ಹೇಳಿದರು.

ಜೆಸಿಐ ಬಾಳೆಹೊನ್ನೂರು ಕ್ಲಾಸಿಕ್ ಸಂಸ್ಥೆಯಿಂದ ಎಸ್‌ಜೆಆರ್ ಪಿಯು ಕಾಲೇಜಿನಲ್ಲಿ ಶುಕ್ರವಾರ ಆಯೋಜಿಸಿದ್ದ ಕ್ಯಾನ್ಸರ್ ಜಾಗೃತಿ ಅಭಿಯಾನದಲ್ಲಿ ಮಾತನಾಡಿ, ಕ್ಯಾನ್ಸರ್ ವೇಗವಾಗಿ ಹರಡುತ್ತಿದ್ದು, ಈ ಕುರಿತು ಜನರಲ್ಲಿ ಜ್ಞಾನ ಹೆಚ್ಚಿಸುವುದು ಅಗತ್ಯವಾಗಿದೆ. ಆಹಾರ ಶೈಲಿ, ದುಶ್ಚಟಗಳ ಪರಿಣಾಮವಾಗಿ ಕ್ಯಾನ್ಸರ್ ಹೆಚ್ಚು ವ್ಯಾಪಿಸುತ್ತಿದೆ. ಕ್ಯಾನ್ಸರ್ ಬಗ್ಗೆ ಇರುವ ಭಯ ಹೋಗಲಾಡಿಸಬೇಕು. ಕ್ಯಾನ್ಸರ್ ಆರಂಭಿಕ ಲಕ್ಷಣಗಳನ್ನು ಗುರುತಿಸಿಕೊಂಡು ಚಿಕಿತ್ಸೆ ಪಡೆದಲ್ಲಿ ರೋಗ ಗುಣಪಡಿಸಲು ಸಾಧ್ಯ ಎಂದರು.

ಜೆಸಿಐ ಅಧ್ಯಕ್ಷ ಇಬ್ರಾಹಿಂ ಶಾಫಿ ಮಾತನಾಡಿ, ಯುವಜನರು ಮದ್ಯ, ಗುಟ್ಖಾ, ತಂಬಾಕು, ಬೀಡಿ ಸಿಗರೇಟು ಬಳಕೆಯಿಂದ ಆರೋಗ್ಯ ಹಾಳುಮಾಡಿಕೊಳ್ಳುತ್ತಿದ್ದಾರೆ. ಕಿರಿಯ ವಯಸ್ಸಿನಲ್ಲಿ ದುಶ್ಚಟಗಳಿಗೆ ಬಲಿಯಾದರೆ ಜೀವನ ಹಾಳು ಮಾಡಿಕೊಳ್ಳಬೇಕಾಗುತ್ತದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.

ರೋಟರಿ ಕ್ಲಬ್ ಮಾಜಿ ಅಧ್ಯಕ್ಷ ಇಬ್ರಾಹಿಂ, ಎಸ್‌ಜೆಆರ್ ಕಾಲೇಜು ಪ್ರಾಚಾರ್ಯ ಕೆ.ಆರ್.ಬೂದೇಶ್, ಜೇಸಿ ನಿಕಟಪೂರ್ವ ಅಧ್ಯಕ್ಷ ಎನ್.ಶಶಿಧರ್, ಕಾರ್ಯದರ್ಶಿ ವಿ.ಅಶೋಕ, ಪೂರ್ವಾಧ್ಯಕ್ಷ ಸತೀಶ್ ಅರಳೀಕೊಪ್ಪ, ಸುಧಾಕರ್, ಸದಸ್ಯರಾದ ಸಿ.ವಿ.ಸುನೀಲ್, ಶಾಹಿದ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net