

ಬೇಲೂರು: ಕ್ಯಾನ್ಸರ್‌ನಿಂದ ಬಳಲುತ್ತಿದ್ದ ನೇರ್ಲಿಗೆ ಗ್ರಾಮದ ಭಾಗ್ಯಮ್ಮ ಎಂಬುವರಿಗೆ ಕಾಂಗ್ರೆಸ್ ಮುಖಂಡ ಗ್ರಾನೈಟ್ ಎಸ್.ಎಚ್.ರಾಜಶೇಖರ್ ವೈಯಕ್ತಿಕವಾಗಿ ಧನಸಹಾಯ ನೀಡಿದರು.
ಬೇಲೂರು ವ್ಯಾಪ್ತಿಯ ಜಾವಗಲ್ ಹೋಬಳಿಯ ನೇರ್ಲಿಗೆ ಗ್ರಾಮದ ಭಾಗ್ಯಮ್ಮ ಎಂಬುವವರು ಹಲವು ವರ್ಷಗಳಿಂದ ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದು, ಇವರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದರು. ಇದನ್ನು ಅರಿತ ಕಾಂಗ್ರೆಸ್ ಮುಖಂಡ ಗ್ರಾನೈಟ್ ಎಸ್.ಎಚ್.ರಾಜಶೇಖರ್, ಕ್ಯಾನ್ಸರ್ ಪೀಡಿತೆ ಭಾಗ್ಯಮ್ಮ ಅವರ ನಿವಾಸಕ್ಕೆ ತೆರಳಿ ಚಿಕಿತ್ಸೆಗಾಗಿ ಆರ್ಥಿಕ ಸಹಾಯ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
ತಾಲೂಕು ಪಂಚಾಯಿತಿ ಮಾಜಿ ಸದಸ್ಯ ವಿಜಯ್‌ಕುಮಾರ್, ಕಾಂಗ್ರೆಸ್ ಮುಖಂಡರಾದ ವಿರೂಪಾಕ್ಷ, ಶ್ರೀರಾಮ್ ನೇರ್ಲಿಗೆ, ಗಂಗಾಧರ್, ತಿಮ್ಮಪ್ಪ ಇತರರಿದ್ದರು.