ಕ್ಯಾನ್ಸರ್‌ಗೆ ಸಕಾಲದಲ್ಲಿ ಚಿಕಿತ್ಸೆ ಅಗತ್ಯ, ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಸಲಹೆ, ಜಿಲ್ಲಾಡಳಿತ ಭವನದಲ್ಲಿ ವಿಶ್ವ ಕ್ಯಾನ್ಸರ್ ಜಾಗೃತಿ ಸಪ್ತಾಹ

04 dhl APMC news ph 2
Published on

ಬೆಂಗಳೂರು ಗ್ರಾಮಾಂತರ: ಕ್ಯಾನ್ಸರ್ ಮಾರಣಾಂತಿಕ ಕಾಯಿಲೆಯಾಗಿದ್ದು, ಈ ಕುರಿತು ಅರಿವು ಮೂಡಿಸಿ ಸಕಾಲದಲ್ಲಿ ಚಿಕಿತ್ಸೆ ಲಭ್ಯವಾಗುವಂತೆ ಕ್ರಮಕೈಗೊಳ್ಳುವುದು ಅತ್ಯಗತ್ಯವಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ತಿಳಿಸಿದರು.

ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ದೇವನಹಳ್ಳಿಯ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಕ್ಯಾನ್ಸರ್ ಜಾಗೃತಿ ದಿನಾಚರಣೆಯಲ್ಲಿ ಮಾತನಾಡಿದರು. ಈ ದಿನದ ಅಂಗವಾಗಿ ಆರೈಕೆ ಅಂತರ ಕಡಿತಗೊಳಿಸಿ ಎಂಬ ಘೋಷವ್ಯಾಕ್ಯದಡಿ 2022 ರಿಂದ 2024ರವರೆಗೆ ಕ್ಯಾನ್ಸರ್ ಜಾಗೃತಿ ಆಂದೋಲನ ಹಮ್ಮಿಕೊಂಡಿರುವ ಪ್ರಯುಕ್ತ ಜಿಲ್ಲೆಯಲ್ಲಿನ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಫೆ. 4 ರಿಂದ 1 ವಾರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಕ್ಯಾನ್ಸರ್ ಆರೈಕೆಗಿರುವ ಕೊರತೆಗಳನ್ನು ನೀಗಿಸುವುದು ಮುಖ್ಯ ಉದ್ದೇಶವಾಗಿದ್ದು, ಈ ನಿಟ್ಟಿನಲ್ಲಿ ಎಲ್ಲರ ಪ್ರಯತ್ನ ಒಗ್ಗೂಡಿಸಿ, ಮುಂದುವರೆಯಬೇಕು ಮಾರಣಾಂತಿಕ ಕಾಯಿಲೆಗಳಿಂದ ಪ್ರತಿಯೊಬ್ಬರೂ ಜಾಗೃತರಾಗಿರಬೇಕು ಎಂದರು.

ಜಿಲ್ಲಾ ಆರೋಗ್ಯಾಧಿಕಾರಿ ಡಾ. ತಿಪ್ಪೇಸ್ವಾಮಿ ಮಾತನಾಡಿ, ರಾಜ್ಯದಲ್ಲಿ ಕ್ಯಾನ್ಸರ್, ಮಧುಮೇಹ, ಹೃದಯರೋಗ ಮತ್ತು ಪಾರ್ಶ್ವವಾಯು ನಿಯಂತ್ರಣ ಕಾರ್ಯಕ್ರಮದ ಮೂಲಕ ಇದುವರೆಗೆ 2271 ಬಾಯಿ ಮತ್ತು ಗಂಟಲು ಕ್ಯಾನ್ಸರ್, 1815 ಸ್ತನ ಕ್ಯಾನ್ಸರ್ 1207 ಗರ್ಭಕಂಠದ ಕ್ಯಾನ್ಸರ್ ಹಾಗೂ 6654 ಇತರೆ ಪ್ರಕರಣ ಪತ್ತೆಯಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net