ಕ್ಯೂಆರ್ ಕೋಡ್ ಮೂಲಕ ಅರ್ಜಿ ಸ್ವೀಕಾರ

22SND-01
Published on

ಸಿಂಧನೂರು: ಚನ್ನಳ್ಳಿ ಗ್ರಾಪಂ ವ್ಯಾಪ್ತಿಯ ಸಿದ್ರಾಂಪುರ ಗ್ರಾಮದ ಸರ್ಕಾರಿ ಶಾಲೆ ಆವರಣದಲ್ಲಿ ಮಂಗಳವಾರ ಉದ್ಯೋಗ ಖಾತ್ರಿ ನಡಿಗೆ ಸಬಲತೆಯಡೆಗೆ ಅಭಿಯಾನ ನಡೆಸಲಾಯಿತು.

ಅಭಿಯಾನದಲ್ಲಿ ವೈಯಕ್ತಿಕ ಕಾಮಗಾರಿ ಕುರಿತು ಮಾಹಿತಿ ನೀಡಿ, ಕಾಮಗಾರಿ ಬೇಡಿಕೆ ಸ್ವೀಕರಿಸಲಾಯಿತು. ಮನೆ ಮನೆಗೆ ಭೇಟಿ ನೀಡಿ, ಕ್ಯೂಆರ್ ಕೋಡ್ ಸ್ಕ್ಯಾನ್ ಮೂಲಕ ಕಾಮಗಾರಿ ಬೇಡಿಕೆ ಸಲ್ಲಿಸುವ ಕುರಿತು ಮಾಹಿತಿ ನೀಡಿ ಗ್ರಾಮಸ್ಥರಿಂದ ಅರ್ಜಿ ಹಾಕಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net