

ಸುರಪುರ: ಹಿಂದುಳಿದವರ ಅಭ್ಯುದಯಕ್ಕಾಗಿ ಪರಿಣಾಮಕಾರಿ ಯೋಜನೆಗಳನ್ನು ಜಾರಿಗೆ ತಂದು ಆಡಳಿತದಲ್ಲಿ ಕ್ರಾಂತಿಕಾರಕ ಬದಲಾವಣೆಗೆ ನಾಂದಿ ಹಾಡಿದವರು ಡಿ.ದೇವರಾಜ ಅರಸು ಎಂದು ಶಾಸಕ ರಾಜಾ ವೆಂಕಟಪ್ಪ ನಾಯಕ ಬಣ್ಣಿಸಿದರು.
ತಹಸಿಲ್ ಕಚೇರಿಯಲ್ಲಿ ತಾಲೂಕು ಆಡಳಿತ ಭಾನುವಾರ ಹಮ್ಮಿಕೊಂಡಿದ್ದ ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಜಯಂತಿ ಕಾರ್ಯಕ್ರಮ ಉದ್ಘಾಟಿಸಿದ ಅವರು, ನನ್ನ ತಂದೆ ರಾಜಾ ಕುಮಾರ ನಾಯಕ ಅವರನ್ನು ರಾಜಕೀಯಕ್ಕೆ ತಂದಿದ್ದೇನೆ ಅರಸು. ಅವರನ್ನು ಹತ್ತಿರದಿಂದ ನೋಡಿದ ಸೌಭಾಗ್ಯ ನನ್ನದು ಎಂದರು.
ರವಿಚಂದ್ರ ರುಕ್ಮಾಪುರ ವಿಶೇಷ ಉಪನ್ಯಾಸ ನೀಡಿದರು. ತಹಸೀಲ್ದಾರ್ ಕೆ. ವಿಜಯಕುಮಾರ, ತಾಪಂ ಇಒ ಬಸವರಾಜ ಸಜ್ಜನ, ಡಿವೈಎಸ್‌ಪಿ ಜಾವೇದ್ ಇನಾಮದಾರ್, ತಾಲೂಕು ವೈದ್ಯಾಧಿಕಾರಿ ಅಧಿಕಾರಿ ಡಾ.ಆರ್.ವಿ.ನಾಯಕ ಇತರರಿದ್ದರು.
ಹಿಂದುಳಿದ ವರ್ಗಗಳ ಸಹಾಯಕ ನಿರ್ದೇಶಕ ತಿಪ್ಪಾರೆಡ್ಡಿ ಪ್ರಾಸ್ತಾವಿಕ ಮಾತನಾಡಿದರು. ಬಿಸಿಎಂ ವಸತಿ ನಿಲಯಗಳಲ್ಲಿ ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆ ವಿಜೇತರು, ಎಸ್ಸೆಸ್ಸೆಲ್ಸಿ, ಪಿಯುಸಿಯಲ್ಲಿ ಅಧಿಕ ಅಂಕ ಗಳಿಸಿದ ಹಾಗೂ ಉತ್ತಮ ಸೇವೆ ಸಲ್ಲಿಸಿದ ಸಿಬ್ಬಂದಿಯನ್ನು ಸನ್ಮಾನಿಸಲಾಯಿತು.