ಕ್ರಾಂತಿವೀರ ಸಂಗೋಳ್ಳಿ ರಾಯಣ್ಣರವರ ಭಾವಚಿತ್ರಕ್ಕೆ ಪುಷ್ಪಾರ್ಚಣೆ

Published on

ಬೆಳಗಾವಿ: ಕ್ರಾಂತಿವೀರ ಸಂಗೋಳ್ಳಿ ರಾಯಣ್ಣನರವರ ಜನ್ಮ ದಿನವಾದ ಆ.15ರಂದು ಸಂಜೆ 5 ಗಂಟೆಗೆ ನಗರದ ಕುಮಾರಗಂಧರ್ವ ಕಲಾ ಮಂದಿರದಲ್ಲಿ ಕ್ರಾಂತಿವೀರ ಸಂಗೋಳ್ಳಿ ರಾಯಣ್ಣ ಅವರ ಭಾವಚಿತ್ರಕ್ಕೆ ಗಣ್ಯರಿಂದ ಪುಷ್ಪಾರ್ಚಣೆ ಕಾರ್ಯಕ್ರಮ ನಡೆಯಲಿದೆ. ಪ್ರೊ. ಕೆ.ಎಸ್. ಕೌಜಲಗಿ ಅವರಿಂದ ಉಪನ್ಯಾಸ ಮತ್ತು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ. ನಗರದ ಎಲ್ಲ ಗಣ್ಯರು ಹಾಗೂ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಮತ್ತು ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಬಹುದಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net