

ವಿಜಯಪುರ: ಕ್ರಿಕೆಟ್ ಬೆಟ್ಟಿಂಗ್ ಪ್ರತ್ಯೇಕ ಪ್ರಕರಣದಲ್ಲಿ ಐವರನ್ನು ಪೊಲೀಸರು ಬಂಧಿಸಿದ್ದಾರೆ.
ವಿಜಯಪುರ ನಗರದ ದೇವಕಿ ನಗರದ ಆಕಾಶ ಗುರುನಾಥ ಬಟಗಿ, ಆಲಮೇಲ ಪಟ್ಟಣದ ಮರ್ದನ ಅಲಿ ಪ್ಯಾಟಿ, ಲಕ್ಷ್ಮಣ ಕಟ್ಟಿಮನಿ, ಬಸವರಾಜ ಕೊಳಾರಿ, ಅನಿಲ ತೆಲ್ಲೂರ ಬಂಧಿತರು.
ವಿಜಯಪುರದ ದೇವಕಿ ನಗರದಲ್ಲಿರುವ ಖಾಸಗಿ ಆಸ್ಪತ್ರೆ ಸಮೀಪ ರಾಜಸ್ಥಾನ ರಾಯಲ್ಸ್ ಹಾಗೂ ಸನ್‌ರೈಸ್ ಹೈದರಾಬಾದ್ ತಂಡದ ನಡುವೆ ಗುರುವಾರ ನಡೆದ ಪಂದ್ಯಾವಳಿಯಲ್ಲಿ ಬೆಟ್ಟಿಂಗ್ ಆಡುತ್ತಿದ್ದ ಮಾಹಿತಿ ಮೇರೆಗೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಈ ಬಗ್ಗೆ ಗಾಂಧಿಚೌಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮತ್ತೊಂದು ಪ್ರಕರಣದಡಿ ಆಲಮೇಲದಲ್ಲಿ ಶುಕ್ರವಾರ ರಾತ್ರಿ ಚೆನ್ನೈ ಸೂಪರ್‌ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ನಡುವೆ ನಡೆದ ಪಂದ್ಯಾವಳಿ ವೇಳೆ ಆನ್‌ಲೈನ್‌ನಲ್ಲಿ ಬೆಟ್ಟಿಂಗ್‌ನಲ್ಲಿ ತೊಡಗಿದ್ದ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಆಲಮೇಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.